ಹಾವೇರಿ/ ಸವಣೂರು: ಭಾರತೀಯ ರಿಸರ್ವ್ ಬ್ಯಾಂಕ್ ನಿರ್ದೇಶನದಂತೆ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಸವಣೂರ ಕೆವಿಜಿ ಬ್ಯಾಂಕ್ ಜಲ್ಲಾಪುರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸವಣು ಹಾಗೂ ಎನ್ ಆರ್ ಎಲ್ ಎಮ್ ಸಂಜೀವಿನಿ ಒಕ್ಕೂಟ ಜಲ್ಲಾಪುರ ವತಿಯಿಂದ ಜಲ್ಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಳಲಕೊಂಡ ಗ್ರಾಮದಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಅಂಗವಾಗಿ ವಿಶೇಷ ಜಾಗೃತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ದಿನಾಂಕ 09.02.2026 ರಂದು ನಡೆದ ಈ ಶಿಬಿರದಲ್ಲಿ ಆರ್ಥಿಕ ಶಿಸ್ತು ಕಾಯ್ದುಕೊಂಡು ಹೆಣ್ಣು ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಸುಕನ್ಯಾ ಸಮೃದ್ಧಿ ಯೋಜನೆ ಮಾಡಿಸಿ ಎಂದು ಸವಣೂರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಉಮಾ ಕೆ. ಎಸ್. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಂತರ ಮಾತನಾಡಿದ ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರದ ಸಮಾಲೋಚಕ ಹರೀಶ್ ಹಿರಳ್ಳಿ ಬ್ಯಾಂಕ್ ಖಾತೆಗಳಿಗೆ ಸಂಬಂಧಿಸಿದಂತೆ ಕೆ.ವೈ.ಸಿ, ಸಿ-ಕೆ.ವೈ.ಸಿ ಮತ್ತು ಮರು ಕೆ.ವೈ.ಸಿ ಪ್ರಕ್ರಿಯೆಗಳ ಮಹತ್ವ ಹಾಗೂ ಸಾಮಾಜಿಕ ಭದ್ರತಾ ಯೋಜನೆಗಳ ಕುರಿತಾಗಿ ಮಾಹಿತಿ ನೀಡಿದರು.
ಕೆವಿಜಿ ಬ್ಯಾಂಕ್ ನ ವ್ಯವಸ್ಥಾಪಕ ಪಿವಿಕೆ ರಾಜು ಮಾತನಾಡಿ ಎಲ್ಲರೂ ಕಡ್ಡಾಯವಾಗಿ ಕೆವೈಸಿಗಳನ್ನು ಹಾಗೂ ಸಾಮಾಜಿಕ ಭದ್ರತಾಯೋಜನೆಗಳನ್ನು ಮಾಡಿಸಿ ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಆರ್ಥಿಕ ಸಾಕ್ಷರತಾ ಸಪ್ತಾಹದ ಕರಪತ್ರಗಳನ್ನು ಬಿಡುಗಡೆ ಮಾಡಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಸದಸ್ಯರಾದ ಶ್ರೀಮತಿ ಈರಮ್ಮ ಬಡಿಗೇರ ಎನ್ ಆರ್ ಎಲ್ ಎಮ್ ಒಕ್ಕೂಟ ಅಧ್ಯಕ್ಷರಾದ ರತ್ನವ್ವ ಹರಿಜನ್ ಸಿಡಿಪಿಯು ಹತ್ತಿಮತ್ತೂರ ಸರ್ಕಲ್ ಸೂಪರ್ ವೈಸರ್ ತೇಜಸ್ವಿನಿ ಕೊಂಡಿ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಎನ್ ಆರ್ ಎಲ್ ಎಂ ಸಿಬ್ಬಂದಿ ಇತರರು ಭಾಗವಹಿಸಿದ್ದರು.
ಶ್ರೀಮತಿ ಮಂಜುಳಾ ಲಕ್ಕಣ್ಣವರ್ ಕಾರ್ಯಕ್ರಮ ನಿರ್ವಹಿಸಿದರು.
ವರದಿ ಬಸವರಾಜ ಎಸ್. ಎನ್.



















