ನವದೆಹಲಿ: ಮಹಾರಾಷ್ಟ್ರ ಸಿಎಂ ಏಕನಾಥ ಶಿಂದೆ ಬಣವನ್ನೇ ನಿಜವಾದ ಶಿವಸೇನೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಶಿಂದೆ ಬಣಕ್ಕೆ ಶಿವಸೇನೆಯ ಮೂಲ ಚಿಹ್ನೆಯಾದ ‘ಬಿಲ್ಲು ಮತ್ತು ಬಾಣ’ದ ಗುರುತು ದೊರಕಿದ್ದು, ಈ ಮೂಲಕ ಶಿವಸೇನೆಯ ಗುರುತನ್ನೇ ಉದ್ಧವ್ ಠಾಕ್ರೆ ಬಣ ಕಳೆದುಕೊಂಡಿದೆ.
2019ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಗೆದ್ದ 55 ವಿಜೇತ ಅಭ್ಯರ್ಥಿಗಳ ಪೈಕಿ ಶೇ 76 ಮಂದಿ ಏಕನಾಥ್ ಶಿಂಧೆ ಅವರನ್ನು ಬೆಂಬಲಿಸುತ್ತಿದ್ದಾರೆ. ಉದ್ಧವ್ ಠಾಕ್ರೆ ಪರವಾಗಿ ಶೇ. 23.5 ಮಂದಿ ಮಾತ್ರ ಇದ್ದಾರೆ ಎಂದು ಚುನಾವಣಾ ಆಯೋಗ ಹೇಳಿದೆ.
ತಮ್ಮ ಬಣವನ್ನೇ ನಿಜವಾದ ಶಿವಸೇನೆ ಎಂದು ಘೋಷಿಸಿದ್ದಕ್ಕೆ ಮುಖ್ಯಮಂತ್ರಿ ಏಕನಾಥ ಶಿಂದೆ ಹರ್ಷ ವ್ಯಕ್ತಪಡಿಸಿದ್ದಾರೆ. ಇದು ಬಾಳಾಸಾಹೇಬ್ ಠಾಕ್ರೆಯವರ ಸಿದ್ಧಾಂತಕ್ಕೆ ಸಿಕ್ಕ ಜಯ ಎಂದು ಅವರು ಹೇಳಿದ್ದಾರೆ.