ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರವೇ ಜನಮನ ರಾಜ್ಯ ಸಂಘಟನೆಯಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ಭ್ರಷ್ಟಾಚಾರ ವಿರುದ್ಧ ಪ್ರತಿಭಟನೆ

ಕರವೇ ಜನ ಮನ, ರಾಜ್ಯ ಸಂಘಟನೆಯ ರಾಜ್ಯಾಧ್ಯಕ್ಷರಾದ. ಕೆ ಜನಾರ್ಧನ ಸಾಲಿಯಾನ್ ರವರ ನೇತೃತ್ವದಲ್ಲಿ ಮೆಗ್ಗಾನ್,ಜಿಲ್ಲಾ ಆಸ್ಪತ್ರೆಯ ಅವ್ಯವಸ್ಥೆ, ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸಿ, ಎಚ್ಚರಿಕೆಯೊಂದಿಗೆ ಸರಿಪಡಿಸಲು ಗಡುವು ನೀಡಿ ಮನವಿಯನ್ನು ಕೊಡಲಾಯಿತು.

ಮೆಗ್ಗಾನ್ ಆಸ್ಪತ್ರೆಯ ಅವ್ಯವಸ್ಥೆಗಳಿಗೆ ಕಡಿವಾಣ ಹಾಕಿ ಪಾರದರ್ಶಕವಾದ ಸೇವೆಯನ್ನು ರೋಗಿಗಳಿಗೆ ನೀಡುವುದೇ ನಿಮ್ಮ ಆಡಳಿತ ವರ್ಗದ ಕರ್ತವ್ಯವಾಗಿದ್ದೂ ನಾವು ವ್ಯಕ್ತಪಡಿಸಿದ ಈ ಎಲ್ಲಾ ಸಮಸ್ಯೆಗಳನ್ನು ಗಮನಕ್ಕೆ ತೆಗೆದುಕೊಳ್ಳದೆ ಕಡೆಗಣಿಸಿದರೆ ಇದಕ್ಕೆಲ್ಲಾ ನಾಂದಿ ಹಾಡುವ ತನಕ ನಮ್ಮ ಸಂಘಟನೆಯು ಹಗಲು ರಾತ್ರಿ ಧರಣಿ ನಡೆಸುವುದು ಶತ ಸಿದ್ದವಾಗಿರುತ್ತದೆ ಆದ ಕಾರಣ ನಾವು ಆಕ್ಷೇಪಣೆ ವ್ಯಕ್ತಪಡಿಸಿದ ವಿಷಯಗಳೆಲ್ಲಾ ನಿಮ್ಮ ಗಮನದಲ್ಲಿದ್ದರೂ ಕೂಡ ನಾವು ಮತ್ತೊಮ್ಮೆ ನಿಮ್ಮ ಗಮನಕ್ಕೆ ತರುತ್ತಿದ್ದು ಕೆಲವೇ ದಿನಗಳಲ್ಲಿ ಇದನ್ನೆಲ್ಲಾ ಸರಿಪಡಿಸದಿದ್ದರೆ ಮುಂದಿನ ಹೋರಾಟಕ್ಕೆ ನಾವು ಸಜ್ಜಾಗುತ್ತೇವೆ ಎಂದು ತಿಳಿಸಿದರು.
ಪ್ರತಿಭಟನೆಯಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್, ಮಾಲತೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಕಿರಣ್ ಕುಮಾರ್ ಕೆ. ಮತ್ತು ರಾಮಣ್ಣ ರಾಗಿಗುಡ್ಡ, ಪಾರ್ತಿಬನ್, ಜಿಲ್ಲಾ ಸಂಚಾಲಕರಾದ ಹರ್ಷಿತ್ ಭಾರದ್ವಾಜ್, ತಾಲೂಕು ಸಂಚಾಲಕರಾದ ಪ್ರತಾಪ್, ಮತ್ತು ಪದಾಧಿಕಾರಿಗಳಾದ ಶೋಭಾ, ಪುಷ್ಪ,ಪ್ರಮುಖ ರಾದ ಲಕ್ಷಿ, ಶ್ರೀಶ ಸಂಗೇಶ್ವರ ಮತ್ತಿತರರು ಭಾಗವಹಿಸಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!