ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷ ಟಿ. ಎಚ್. ಎಂ. ರಾಜಕುಮಾರ್ ರವರಿಗೆ ಸಮಾಜ ಸೇವಾ ಕ್ಷೇತ್ರದಲ್ಲಿ ಅತ್ಯುತ್ತಮ ‘ಸೇವಾ ರತ್ನ ಪ್ರಶಸ್ತಿ’

ಬಳ್ಳಾರಿ/ ಕಂಪ್ಲಿ : ಸಿಂದಗಿ ನಗರದಲ್ಲಿ ನೇರ ನುಡಿ ಸುದ್ದಿವಾಹಿನಿಯ ಮೊದಲನೇ ವರ್ಷದ ವಾರ್ಷಿಕೋತ್ಸವ ಜರುಗಿತು.
ಪರಮಪೂಜ್ಯ ಗುರುಕುಲ ಭಾಸ್ಕರ ಶ್ರೀ ಡಾ॥ ಪ್ರಭುಸಾರಂಗದೇವ ಶಿವಾಚಾರ್ಯರು,
ಸಾರಂಗಮಠ ಗಚ್ಚಿನಮಠ, ಸಿಂದಗಿ, ಪರಮಪೂಜ್ಯ ಶ್ರೀ ಮಹಾಂತ ಮಹಾಸ್ವಾಮಿಗಳು
ವಿರಕ್ತಮಠ, ದಿವ್ಯ ಸಾನಿಧ್ಯವಹಿಸಿದ್ದರು.
ಸಿಂದಗಿ ಕ್ಷೇತ್ರದ ಶಾಸಕರಾದ ಅಶೋಕ್ ಎಂ. ಮನಗೂಳಿರವರು ಕಾರ್ಯಕ್ರಮ ಉದ್ಘಾಟಿಸಿದರು.
ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ರಾಜ್ಯ ಕಾರ್ಯಧ್ಯಕ್ಷ
ಟಿ ಹೆಚ್ ಎಂ ರಾಜಕುಮಾರ್ ರವರು ರಾಜ್ಯದಲ್ಲಿ ನಡೆಯುತ್ತಿರುವ ಭ್ರಷ್ಟಾಚಾರ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ ಸಮರ್ಪಕವಾಗಿ ಬಳಸಿಕೊಂಡು ಕರ್ನಾಟಕ ರಾಜ್ಯ ಭ್ರಷ್ಟಾಚಾರ ಮುಕ್ತ ರಾಜ್ಯ ಮಾಡಲು ಶ್ರಮಿಸುತ್ತಿದ್ದಾರೆ, ಅವರ ಸಾಮಾಜಿಕ ಸೇವೆಯನ್ನು ಅಭಿನಂದಿಸುತ್ತ ನೇರ ನುಡಿ ಸುದ್ದಿ ವಾಹಿನಿಯ ಪ್ರಥಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಅವರಿಗೆ ಸಾಮಾಜಿಕ ಕ್ಷೇತ್ರದ ಅತ್ಯುತ್ತಮ ಸೇವೆ ಸಲ್ಲಿಸಿದಕ್ಕಾಗಿ ‘ಸೇವಾ ರತ್ನ ಪ್ರಶಸ್ತಿ’ ಯನ್ನು ನೀಡಿ ಗೌರವಿಸಿದೆ.
ಈ ಸಂದರ್ಭದಲ್ಲಿ ಸಮಾಜ ಸೇವಾ ಕಾರ್ಯಕರ್ತರ ವೇದಿಕೆಯ ರಾಜ್ಯಾಧ್ಯಕ್ಷರಾದ ಶ್ರೀ ಚನ್ನಯ್ಯ ವಸ್ತ್ರದ್ ಅವರು ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ನೇರನುಡಿ ಸುದ್ದಿ ವಾಹಿನಿಯ
ರಮೇಶ್ ಬಾ, ಇರ್ಫಾನ ಶೇಕ್, ಇಸ್ಮಾಯಿಲ್ ಶೇಖ್, ಹಾಗೂ ಸಂಘಟನೆಯ ಕಲಬುರ್ಗಿ ಹಾಗೂ ಜೇವರ್ಗಿ ತಾಲೂಕಿನ ಸಮಿತಿಯವರು ಕೂಡ ಭಾಗವಹಿಸಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!