ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಪರೀಕ್ಷೆಯಲ್ಲಿ ಪಿ.ಎಸ್.ಸಜ್ಜನ ಕಾಲೇಜು ವಿದ್ಯಾರ್ಥಿನಿಯರ ಸಾಧನೆ

ಬೇವೂರು : ಬಾಗಲಕೋಟೆ ವಿಶ್ವವಿದ್ಯಾನಿಲಯದ ಇತ್ತೀಚಿಗೆ ನಡೆದ ಐದನೇ ಸೆಮಿಸ್ಟರನ ಪರೀಕ್ಷಾ ಫಲಿತಾಂಶ ಬರಲಾಗಿದ್ದು ಬೇವೂರಿನ ಆದರ್ಶ ವಿದ್ಯಾವರ್ಧಕ ಸಂಘದ ಶ್ರೀ ಪರಪ್ಪ ಸಂಗಪ್ಪ ಸಜ್ಜನ ಕಲಾ ಮಹಾವಿದ್ಯಾಲಯದ ವಿದ್ಯಾರ್ಥಿನಿಯರು ಪರೀಕ್ಷೆಯಲ್ಲಿ ಉತ್ತಮ ಸಾಧನೆ ಗೈದಿದ್ದಾರೆ. ೯೬.೧೪% ಅಂಕಗಳನ್ನು ಪಡೆದು ವಿಜಯಲಕ್ಷ್ಮೀ. ಯ ಬಂಡಿವಡ್ಡರ ಕಾಲೇಜಿಗೆ ಪ್ರಥಮ, ೯೫.೮೫% ಅಂಕಗಳನ್ನು ಪಡೆದು ಪವಿತ್ರಾ.ಮ. ಮಾಗನೂರ ದ್ವಿತೀಯ, ೯೩.೪೨% ಅಂಕಗಳನ್ನು ಪಡೆದು ಫಾತಿಮಾ ಅ.ನಧಾಪ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.

೧೦೦ ಕ್ಕೆ ೧೦೦ ಅಂಕಗಳ ಪಡೆದ ವಿದ್ಯಾರ್ಥಿನಿಯರು : ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ವಿದ್ಯಾರ್ಥಿನಿಯರಾದ ವಿಜಯಲಕ್ಷ್ಮೀ ಯ. ಬಂಡಿವಡ್ಡರ. ಅಭಿವೃದ್ಧಿ ಅರ್ಥಶಾಸ್ತ್ರ ವಿಷಯದಲ್ಲಿ ೧೦೦ ಕ್ಕೆ ೧೦೦, ಪವಿತ್ರಾ‌.ಮ. ಮಾಗನೂರ ಇದೇ ವಿಷಯದಲ್ಲಿ ೧೦೦ ಕ್ಕೆ ೧೦೦ ಹಾಗೂ ಫಾತಿಮಾ.ಅ.ನಧಾಪ ೧೦೦ ಕ್ಕೆ ೧೦೦ ಅಂಕಗಳನ್ನು ಪಡೆದುಕೊಂಡಿದ್ದಾರೆ. ವಿದ್ಯಾರ್ಥಿನಿ ಜ್ಯೋತಿ. ಸಿ.ಗೌಡರ ಅಭಿವೃದ್ಧಿ ಅರ್ಥಶಾಸ್ತ್ರ ಹಾಗೂ ಭಾರತೀಯ ಬ್ಯಾಂಕೋದ್ಯಮ ಮತ್ತು ಹಣಕಾಸು ಎರಡು ವಿಷಯಗಳಲ್ಲಿ ೧೦೦ ಕ್ಕೆ ೧೦೦ ಅಂಕಗಳನ್ನು ಪಡೆದು ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಆದರ್ಶವಿದ್ಯಾವರ್ಧಕ ಸಂಘದ ಅಧ್ಯಕ್ಷ ನ್ಯಾಯವಾದಿ ಜಿ.ಜಿ. ಮಾಗನೂರ ಆಡಳಿತ ಮಂಡಳಿಯ ಸದಸ್ಯರು ಬಾಗಲಕೋಟೆ ವಿಶ್ವವಿದ್ಯಾಲಯದ ಸಿಂಡಿಕೇಟ ಸದಸ್ಯರು, ಕಾಲೇಜಿನ ಪ್ರಾಚಾರ್ಯರಾದ ಡಾ. ಜಗದೀಶ ಗು. ಭೈರಮಟ್ಟಿ ಅರ್ಥಶಾಸ್ತ ವಿಭಾಗದ ಉಪನ್ಯಾಸಕರಾದ ಶ್ರೀ ಎಸ್.ಎಸ್ ಆದಾಪೂರ ಸೇರಿದಂತೆ ಕಾಲೇಜಿನ ಸಿಬ್ಬಂದಿವರ್ಗ ವಿದ್ಯಾರ್ಥಿನಿಯರ ಸಾಧನೆಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!