
ಎಕ್ಸ್ ಲೆಂಟ್ ಪದವಿ ಪೂರ್ವ ಕಾಲೇಜು ಸುಣ್ಣಾರಿ, ಕುಂದಾಪುರ ತಾಲ್ಲೂಕು ಉಡುಪಿ ಜಿಲ್ಲೆ ಇವರು ಫೆಬ್ರವರಿ 8 ರಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ನಗರದ ಪುರಭವನದಲ್ಲಿ ಒಂದು ಕೋಟಿ ರೂಪಾಯಿ ವಿದ್ಯಾರ್ಥಿ ವೇತನಕ್ಕೆ ಪರೀಕ್ಷೆ ನಡೆಸಿದ್ದರು.
ಈ ಪರೀಕ್ಷೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸುಂಕದಗದ್ದೆ ಶಾಲೆಯ 4ನೇ ತರಗತಿ ವಿದ್ಯಾರ್ಥಿಗಳಾದ ಜಾಹ್ನವಿ ಮತ್ತು ಮಾನಸ ಆಯ್ಕೆಯಾಗಿದ್ದಾರೆ.

ಇವರಿಗೆ ಶಾಲೆಯ ವತಿಯಿಂದ ಹಾಗೂ ಎಸ್ ಡಿ ಎಂ ಸಿ ವತಿಯಿಂದ ಅಭಿನಂದಿಸಲಾಯಿತು.
ಇವರ ಸಂಪೂರ್ಣ ಶಿಕ್ಷಣದ ವೆಚ್ಚವನ್ನು ಭರಿಸಲು ಎಕ್ಸಲೆಂಟ್ ಕಾಲೇಜಿನವರು ಒಪ್ಪಿದ್ದಾರೆ.
- ಕರುನಾಡ ಕಂದ ಪತ್ರಿಕೆ



















