ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಫಾಲ್ಗುಣಿ ನದಿಗೆ ಕೈಗಾರಿಕಾ ವಿಷಕಾರಿ ತ್ಯಾಜ್ಯ ಸೇರ್ಪಡೆ : ಜನವಸತಿ ಪ್ರದೇಶಗಳಲ್ಲಿ ಆರೋಗ್ಯದ ಆತಂಕ

ತಕ್ಷಣ ಕ್ರಮ ಕೈಗೊಳ್ಳುವಂತೆ ‘ಸುರಾಜ್ಯ ಅಭಿಯಾನ’ದಿಂದ ಜಿಲ್ಲಾಧಿಕಾರಿಗಳಿಗೆ ಮನವಿ.

ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ರಾಯಿಕಟ್ಟೆ ಪ್ರದೇಶದಲ್ಲಿ ಹರಿಯುವ ಪಾಲ್ಗುಣಿ ನದಿಗೆ ಸಮೀಪದ ಕೈಗಾರಿಕೆಗಳಿಂದ ವಿಷಕಾರಿ ರಾಸಾಯನಿಕ ಮತ್ತು ತ್ಯಾಜ್ಯಗಳನ್ನು ಅನಧಿಕೃತವಾಗಿ ಬಿಡಲಾಗುತ್ತಿದೆ. ಇದರಿಂದಾಗಿ ನದಿ ನೀರು ತೀವ್ರವಾಗಿ ಮಲಿನಗೊಂಡಿದ್ದು, ನೀರಿನ ಬಣ್ಣ ಬದಲಾಗಿ ಪರಿಸರದಲ್ಲಿ ತೀವ್ರ ದುರ್ವಾಸನೆ ಹರಡುತ್ತಿದೆ. ತಣ್ಣೀರುಬಾವಿ ಸೇತುವೆ ಕಾಮಗಾರಿಗಾಗಿ ನದಿಯ ಹರಿವನ್ನು ತಾತ್ಕಾಲಿಕವಾಗಿ ತಡೆಹಿಡಿದಾಗ, ಕೇವಲ ಐದು ದಿನಗಳಲ್ಲಿ ಈ ಆಘಾತಕಾರಿ ಸತ್ಯ ಬಹಿರಂಗಗೊಂಡಿದೆ. ಈ ಮೊದಲು ಈ ವಿಷಕಾರಿ ತ್ಯಾಜ್ಯಗಳು ನೇರವಾಗಿ ಸಮುದ್ರಕ್ಕೆ ಸೇರುತ್ತಿದ್ದವು. 
ನದಿಯಲ್ಲಿ ನೂರಾರು ಮೀನುಗಳು, ಹಾವುಗಳು ಹಾಗೂ ಇತರ ಜಲಚರಗಳು ಸತ್ತು ತೇಲುತ್ತಿರುವುದು ಜಲಚರಗಳ ಮಾರಣಹೋಮವನ್ನು ಸಾರುತ್ತಿದೆ. ಕಲುಷಿತ ನೀರಿನಿಂದಾಗಿ ಸ್ಥಳೀಯ ನಿವಾಸಿಗಳಲ್ಲಿ ಜ್ವರ, ಹೊಟ್ಟೆ ಸಂಬಂಧಿತ ಕಾಯಿಲೆ ಹಾಗೂ ಸಾಂಕ್ರಾಮಿಕ ರೋಗಗಳು ಹರಡುವ ಭೀತಿ ಎದುರಾಗಿದ್ದು, ಇದು ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಯಾಗಿದೆ.

ಈ ಕೃತ್ಯವು ಭಾರತೀಯ ನ್ಯಾಯ ಸಂಹಿತೆ (BNS) 2023 ರ ವಿವಿಧ ಸೆಕ್ಷನ್‌ಗಳ ಉಲ್ಲಂಘನೆಯಾಗಿದ್ದು, ನಾಗರಿಕರ ಮೂಲಭೂತ ಹಕ್ಕಿನ ಹರಣವಾಗಿದೆ. ಈ ಗಂಭೀರ ಪರಿಸ್ಥಿತಿಯ ಕುರಿತು ಹಿಂದೂ ಜನಜಾಗೃತಿ ಸಮಿತಿಯ ‘ಸುರಾಜ್ಯ ಅಭಿಯಾನ’ವು ಜಿಲ್ಲಾಧಿಕಾರಿಗಳಾದ ಶ್ರೀ ರಾಜು ಕೆ ಇವರಿಗೆ ಮನವಿ ಸಲ್ಲಿಸಿ ತಕ್ಷಣದ ಕ್ರಮಕ್ಕೆ ಆಗ್ರಹಿಸಿದೆ.

ಮಾಲಿನ್ಯದ ಮೂಲ ಪತ್ತೆಹಚ್ಚಿ ತಪ್ಪಿತಸ್ಥ ಕೈಗಾರಿಕೆಗಳ ಪರವಾನಗಿ ರದ್ದುಗೊಳಿಸಬೇಕು, ನದಿ ನೀರನ್ನು ವೈಜ್ಞಾನಿಕ ಪರೀಕ್ಷೆಗೆ ಒಳಪಡಿಸಬೇಕು ಮತ್ತು ಬಾಧಿತ ಜನರಿಗಾಗಿ ತಕ್ಷಣ ವೈದ್ಯಕೀಯ ಶಿಬಿರಗಳನ್ನು ಆಯೋಜಿಸಬೇಕು ಎಂದು ಶ್ರೀ ಪ್ರಶಾಂತ್ ಕಾಂಚನ್ ಅವರು ಒತ್ತಾಯಿಸಿದ್ದಾರೆ. ವಿಳಂಬ ಧೋರಣೆಯು ಪರಿಸರಕ್ಕೆ ಮತ್ತಷ್ಟು ಹಾನಿ ಉಂಟುಮಾಡಲಿದ್ದು, ಜಿಲ್ಲಾಡಳಿತವು ತಕ್ಷಣ ಕಾರ್ಯ ಪ್ರವೃತ್ತರಾಗಬೇಕು ಎಂದು ವಿನಂತಿಸಲಾಗಿದೆ.

ಈ ಸಂದರ್ಭದಲ್ಲಿ ಉದ್ಯಮಿಗಳಾದ ಎಂ ಜೆ ಶೆಟ್ಟಿ, ಭಾಸ್ಕರ್ ಕೋಲ್ನಾಡ್, ಅಮರನಾಥ್ ಶೆಟ್ಟಿ, ರಾಯಿಕಟ್ಟೆ ನಿವಾಸಿಗಳಾದ ತುಳಸಿದಾಸ್ ಕೂಳೂರು ಮತ್ತು ಅವರೆಲ್, ನ್ಯಾಯವಾದಿಗಳಾದ ಸುಷ್ಮಾ, ಈಶ್ವರ್ ಕೊಟ್ಟಾರಿ, ಜಲಜಾಕ್ಷಿ, ಹಿಂದೂ ರಾಷ್ಟ್ರ ಸಮನ್ವಯ ಸಮಿತಿಯ ಶ್ರೀ ದಿನಕರ ಪೂಜಾರಿ ಮತ್ತು ಇನ್ನಿತರರು ಉಪಸ್ಥಿತರಿದ್ದರು.

ವರದಿ ಚಂದ್ರಶೇಖರ್ ಹೆಬ್ಬಾರ್ ಕೊಲ್ಯ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!