ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮಳಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೊಳಗಿಯಲ್ಲಿ ಅಂದಾಜು 35 ರಿಂದ 40 ವರ್ಷ ಪ್ರಾಯದ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದ್ದು, ಶವ ದೊರೆತ ಸ್ಥಳಕ್ಕೆ ಮುಂಡಗೋಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವ , ರುಂಡ ಬೇರ್ಪಟ್ಟ ರೂಪದಲ್ಲಿ ಪತ್ತೆಯಾಗಿದ್ದು, ಶವ ಸಿಕ್ಕ ಪ್ರಕರಣ ತಾಲೂಕಿನಾದ್ಯಂತ ಭಾರಿ ಆತಂಕದ ವಾತಾವರಣ ಸೃಷ್ಟಿಸಿದೆ. ಸೂಕ್ತ ಪೊಲೀಸ್ ತನಿಖೆ ಬಳಿಕ ಪ್ರಕರಣದ ಸತ್ಯಾಸತ್ಯತೆ ತಿಳಿಯಲಿದೆ. ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದು ಹಂತಕರ ಪತ್ತೆಗೆ ಬಲೆ ಬೀಸಿದ್ದಾರೆ.



















