ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಸ್ತೆಯ ಮಧ್ಯದ ಗುಂಡಿಯಲ್ಲಿ ಕಲುಷಿತ ನೀರು, ಸೊಳ್ಳೆಗಳ ಹಾವಳಿ, ಡೆಂಗಿ, ಮಲೇರಿಯಾ, ಚಿಕನ್‍ಗುನ್ಯಾ, ಮೆದುಳು ಜ್ವರದ ಭೀತಿಯಲ್ಲಿ ಜನರು

ಬಳ್ಳಾರಿ / ಕುರುಗೋಡು: ತಾಲ್ಲೂಕಿನ ಯರಿಂಗಳಿಗಿ ಗ್ರಾಮದ ನಾಲ್ಕನೇ ವಾರ್ಡ್‍ನಲ್ಲಿ ಚರಂಡಿ ನಿರ್ಮಾಣ ಮಾಡದ ಪರಿಣಾಮ ಕಲುಷಿತ ನೀರು ರಸ್ತೆಯ ಮೇಲೆ ಹರಿಯುತ್ತಿದೆ.

ನಿರಂತರವಾಗಿ ನೀರು ಹರಿಯುವುದರಿಂದ ರಸ್ತೆಯ ಮಧ್ಯದಲ್ಲಿ ಗುಂಡಿ ನಿರ್ಮಾಣವಾಗಿದ್ದು ಕಲುಷಿತ ನೀರು ರಸ್ತೆಯ ಗುಂಡಿಯಲ್ಲಿ ಶೇಖರಣೆಯಾಗುತ್ತಿದೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಟ್ಟಡದ ಕಾಂಪೌಂಡ್‍ಗೆ ಹೊಂದಿಕೊಂಡು ಕಿರು ನೀರು ಸರಬರಾಜು ಘಟಕ ತುಂಬಿ ನಿರಂತರವಾಗಿ ಹರಿಯುವ ನೀರು ರಸ್ತೆಯ ಮಧ್ಯದ ಗುಂಡಿಗೆ ಸೇರುತ್ತಿದೆ.

ರಸ್ತೆಯ ಮಧ್ಯದ ಗುಂಡಿಯಲ್ಲಿ ಕಲುಷಿತ ನೀರು ನಿಲ್ಲುವುದರಿಂದ ಸುತ್ತಮುತ್ತಲಿನ ಪ್ರದೇಶದಲ್ಲಿ ದುರ್ವಾಸನೆ ಆವರಿಸಿದೆ. ಸೊಳ್ಳೆಗಳ ಹಾವಳಿ ಹೆಚ್ಚಾಗಿದ್ದು, ಜನರು ಸೊಳ್ಳೆ ಕಡಿತದಿಂದ ಬರುವ ಡೆಂಗಿ, ಮಲೇರಿಯಾ, ಚಿಕನ್‍ಗುನ್ಯ, ಮೆದುಳುಜ್ವರದ ಭೀತಿಯಲ್ಲಿ ಕಾಲಕಳೆಯುವಂತಾಗಿದೆ.

ಇದೇ ಪ್ರದೇಶದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಂಗನವಾಡಿ ಕೇಂದ್ರವಿದೆ. ವಿದ್ಯಾರ್ಥಿಗಳು ನಿತ್ಯ ಇದೇ ಕಲುಷಿತ ನೀರು ದಾಟಿ ಶಾಲೆಗೆ ಹೋಗಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಚರಂಡಿ ಸಮಸ್ಯೆ ಕುರಿತು ಗ್ರಾಮ ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದಿದೆ. ಆದರೂ ಪ್ರಯೋಜನವಾಗಿಲ್ಲ.

– ಪರಶುರಾಮ, ಗ್ರಾಮ ಪಂಚಾಯಿತಿ ಸದಸ್ಯ

ಚರಂಡಿ ಮತ್ತು ರಸ್ತೆ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ ಕ್ರಿಯಾಯೋಜನೆ ತಯಾರಿಸುವಂತೆ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚಿಸಲಾಗಿದೆ.

  • ಶಿವರಾಮ ರೆಡ್ಡಿ, ತಾಲ್ಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ, ಕುರುಗೋಡು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!