ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೈಗಾರಿಕಾ ಕಾರಿಡಾರ್‌ಗೆ ಭೂಮಿ ಮೀಸಲು ಶಾಸಕ ಹೆಚ್.ಆರ್.ಗವಿಯಪ್ಪ ಹೇಳಿಕೆ

ವಿಜಯನಗರ / ಹೊಸಪೇಟೆ : ಜಿಲ್ಲೆಯಲ್ಲಿ ಕೈಗಾರಿಕಾ ಕಾರಿಡಾರ್ ಸ್ಥಾಪನೆಗಾಗಿ ಮರಿಯಮ್ಮನಹಳ್ಳಿ ವ್ಯಾಪ್ತಿಯಲ್ಲಿ ಈಗಾಗಲೇ 1 ಸಾವಿರ ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಇದರಿಂದ ಸ್ಥಳೀಯ ನಿರುದ್ಯೋಗಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಶಾಸಕ ಹೆಚ್‌.ಆ‌ರ್.ಗವಿಯಪ್ಪ ಹೇಳಿದರು.

ಹೊಸಪೇಟೆಯ ವಿಜಯನಗರ ಕಾಲೇಜು ಆವರಣದಲ್ಲಿ ಶನಿವಾರ ಆಯೋಜಿಸಲಾಗಿದ್ದ ಮೆಗಾ ಉದ್ಯೋಗ ಮೇಳವನ್ನು ಉದ್ಘಾಟಿಸಿ ಮಾತನಾಡಿದರು.

ಜಿಲ್ಲೆಯು ಪ್ರವಾಸೋದ್ಯಮ ತಾಣವಾಗಿದ್ದು ಮುಂದಿನ ದಿನಗಳಲ್ಲಿ ಬೃಹತ್ತಾಗಿ ಬೆಳೆಯುವ ಸಂಭವ ಹೆಚ್ಚಿದೆ. ಹಾಗೆಯೇ ಜಿಲ್ಲೆಯಲ್ಲಿ ವಸತಿ ಗೃಹಗಳ ಕೊರತೆ ಇದೆ. ಆದ್ದರಿಂದ ಜಿಲ್ಲೆಯಲ್ಲಿ ವಿವಿಧೆಡೆ 150 ರಿಂದ 200 ಎಕರೆ ಸರ್ಕಾರಿ ಸ್ಥಳ ಗರುತಿಸಿ ಸುಸಜ್ಜಿತವಾದ ಗೆಸ್ಟ್‌ಹೌಸ್ ನಿರ್ಮಿಸಿ ಪ್ರವಾಸೋದ್ಯಮ ಇಲಾಖೆಗೆ ಹಸ್ತಾಂತರಿಸಲು ಯೋಜನೆ ರೂಪಿಸಲಾಗಿದೆ ಎಂದರು.

ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ ಮಾತನಾಡಿ, ಮೇಳದಲ್ಲಿ 75ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಿದ್ದು, ಅಭ್ಯರ್ಥಿಗಳು ಸಿಕ್ಕ ಅವಕಾಶವನ್ನು ಶ್ರದ್ಧೆಯಿಂದ ಬಳಸಿಕೊಳ್ಳಬೇಕು ಎಂದು ಕರೆ ನೀಡಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ನೋಂಗ್ವಾಯ್ ಮಹ್ಮದ್ ಅಲಿ ಅಕ್ರಂ ಷಾ, ಜಿಲ್ಲಾ ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಹೆಚ್.ಎನ್.ಎಫ್.ಇಮಾಮ್ ನಿಯಾಜಿ, ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ವಿಜಯನಗರ ಕಾಲೇಜು ಪ್ರಾಂಶುಪಾಲರು ಮಹಾಂತೇಶ್ ಆರಾಧ್ಯಮಠ, ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಅಶ್ವಿನ್ ಕೊತ್ತಂಬರಿ, ವಿವಿಧ ಕಂಪನಿಗಳ ಮುಖ್ಯಸ್ಥರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಸೇರಿದಂತೆ ಇತರರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!