ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸುವುದು ನಮ್ಮ ಆದ್ಯತೆ : ಶಾಸಕ ಎಸ್.ಎನ್. ಚನ್ನಬಸಪ್ಪ

ಶಿವಮೊಗ್ಗ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೌಶಲ್ಯಾಭಿವೃದ್ಧಿ ಇಲಾಖೆಯ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಇಂದು ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಬೃಹತ್ ಉದ್ಯೋಗ ಮೇಳವನ್ನು ಶಾಸಕರಾದ ಶ್ರೀ ಎಸ್. ಎನ್. ಚನ್ನಬಸಪ್ಪ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕರು, “ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯುವಜನತೆಗೆ ಕೇವಲ ಪದವಿ ಮುಖ್ಯವಲ್ಲ, ಅದರೊಂದಿಗೆ ಉದ್ಯೋಗದ ಕೌಶಲ್ಯವೂ ಅತಿ ಅಗತ್ಯ. ಜಿಲ್ಲೆಯ ಅಭ್ಯರ್ಥಿಗಳಿಗೆ ಅವರ ಶೈಕ್ಷಣಿಕ ಅರ್ಹತೆಗೆ ತಕ್ಕಂತೆ ಸೂಕ್ತ ಕೆಲಸ ದೊರಕಿಸಿಕೊಡುವ ನಿಟ್ಟಿನಲ್ಲಿ ಇಂತಹ ಮೇಳಗಳು ಸಹಕಾರಿಯಾಗಿವೆ. ಕಂಪನಿಗಳು ಮತ್ತು ಅಭ್ಯರ್ಥಿಗಳ ನಡುವೆ ಈ ಮೇಳವು ಒಂದು ಸೇತುವೆಯಾಗಿ ಕೆಲಸ ಮಾಡುತ್ತಿದೆ ” ಎಂದು ಅಭಿಪ್ರಾಯಪಟ್ಟರು.
ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯರಾದ ಶ್ರೀ ಡಿ.ಎಸ್ ಅರುಣ್, ಜಿಲ್ಲಾಧಿಕಾರಿಗಳಾದ ಶ್ರೀ ಪ್ರಭುಲಿಂಗ ಕವಳಿಕಟ್ಟಿ, ಜಿಲ್ಲಾ ರಕ್ಷಣಾಧಿಕಾರಿಗಳಾದ ಶ್ರೀ ನಿಖಿಲ್ ಬಿ. ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ವರದಿ: ಕೊಡಕ್ಕಲ್ ಶಿವಪ್ರಸಾದ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!