ಕಾಳಗಿ: ಹಸಿರು ಕ್ರಾಂತಿಯ ಹರಿಕಾರ, ಭಾರತದ ಮಾಜಿ ಉಪ ಪ್ರಧಾನಿ ದೀನ ದಲಿತರ ಆಶಾಕಿರಣರಾದ ಡಾ.ಬಾಬು ಜಗಜೀವನರಾಮ್ ಅವರ 119ನೇ ಜಯಂತೋತ್ಸವದ ಅಂಗವಾಗಿ ಮಾರ್ಚ್ 6ರಂದು ಶುಕ್ರವಾರ ಬೆಳಗ್ಗೆ 11ಕ್ಕೆ ಕಾಳಗಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ ಎಂದು ಹಸಿರು ಕ್ರಾಂತಿ ಹರಿಕಾರ ಡಾ. ಬಾಬು ಜಗಜೀವನ ರಾಮ್ ರವರ 118ನೇ ಜಯಂತೋತ್ಸವವನ್ನು ಸಮಿತಿಯ ಕಾಳಗಿ ತಾಲೂಕು ಅಧ್ಯಕ್ಷರಾದ ಮಲ್ಲಿಕಾರ್ಜುನ ಸಿಂಗೆ ಗೊಟೂರ ಅವರು ತಿಳಿಸಿದ್ದಾರೆ.
ಈ ಸಭೆಯಲ್ಲಿ ಜಯಂತೋತ್ಸವದ ಅಧ್ಯಕ್ಷ ಹಾಗೂ ಇತರ ಪದಾಧಿಕಾರಿಗಳನ್ನು ನೇಮಕ ಮಾಡಲಾಗುವುದು. ಸಮಾಜದ ಹಿರಿಯ ಮುಖಂಡರು, ಹೋರಾಟಗಾರರು, ಮಾದಿಗ ಸಮಾಜ ಎಲ್ಲಾ ಕುಲಬಾಂಧವರು ಸಭೆಯಲ್ಲಿ ಭಾಗವಹಿಸಬೇಕು ಎಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
- ಕರುನಾಡ ಕಂದ ಪತ್ರಿಕೆ




















