ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ದುಡ್ಡನಹಳ್ಳಿ ಸರ್ಕಾರಿ ಪ್ರೌಢಶಾಲೆಗೆ ರೋಟರಿ ಸಿದ್ದರಬೆಟ್ಟ ಸಂಸ್ಥೆಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ತುಮಕೂರು ಜಿಲ್ಲೆಯ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿಯ ದುಡ್ಡನಹಳ್ಳಿ ಸರ್ಕಾರಿ ಶಾಲೆಗೆ ಸೌಕರ್ಯ ಒದಗಿಸಿದ ಸಿದ್ಧರಬೆಟ್ಟ ರೋಟರಿ ಸಂಸ್ಥೆ.

ಕೊರಟಗೆರೆಯ ಬಾಲಾಜಿ ಟೆಕ್ಸ್ ಟೈಲ್ಸ್ ನ ಮಾಲೀಕರು, ರೋಟರಿ ಸಿದ್ದರಬೆಟ್ಟ ಸಂಸ್ಥೆಯ ಅಧ್ಯಕ್ಷರು ಆದಂತಹ ಶ್ರೀಯುತ ದರ್ಶನ್ ಬಾಲಾಜಿ ಹಾಗೂ ಅವರ ಧರ್ಮ ಪತ್ನಿಯವರಾದ ಶ್ರೀಮತಿ ರೀತು ರವರು ಹಾಗೂ ಕೋಳಾಲ ಆರಕ್ಷಕ ಠಾಣೆಯ ಪಿ ಎಸ್ ಐ ಯೋಗೇಶ್ ರವರುಮತ್ತು ಯೂಥ್ ಫಾರ್ ಸೇವಾ ಸಂಸ್ಥೆಯ ಇವರುಗಳು ಆಗಮಿಸಿ ರೋಟರಿ ಕ್ಲಬ್‌ನಿಂದ ಸರ್ಕಾರಿ ಶಾಲೆಗಳಲ್ಲಿ ಓದುವ ಮಕ್ಕಳಿಗೆ ಅಗತ್ಯ ಮೂಲಸೌಕರ್ಯಗಳನ್ನು ಒದಗಿಸುವುದು ಅವಶ್ಯ. ಸರ್ಕಾರಿ ಶಾಲೆಯ ಮಕ್ಕಳಿಗೆ ಮತ್ತು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಉಚಿತ ಬ್ಯಾಗ್ ನ್ನು ಯೂಥ್ ಫಾರ್ ಸೇವಾ ಸಂಸ್ಥೆಯ ವತಿಯಿಂದ ಸರ್ಕಾರಿ ಶಾಲೆಗೆ ಉಚಿತವಾಗಿ ಬ್ಯಾಗ್ ವಿತರಣೆ ಮಾಡಿದರು. ರೋಟರಿ ಸಂಸ್ಥೆಗಳ ವತಿಯಿಂದ ಸರಕಾರಿ ಶಾಲೆಗಳಿಗೆ ವಿವಿಧ ಸೌಲಭ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಈ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕು ಈ ಮೂಲಕ ಸರಕಾರಿ ಶಾಲೆಗಳನ್ನು ಬಲಪಡಿಸಿ ಬಡ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ದೊರೆಯುವಂತೆ ನೋಡಿಕೊಳ್ಳಬೇಕು ಎಂದು ರೋಟರಿ ಸಂಸ್ಥೆಯ ಅಧ್ಯಕ್ಷರು ದರ್ಶನ್ ಮನವಿ ಮಾಡಿದರು. ಇದರಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಮತ್ತು ಹೆಣ್ಣು ಮಕ್ಕಳು ಅತಿ ಹೆಚ್ಚು ಓದುವುದರ ಬಗ್ಗೆ ಆಸಕ್ತಿ ಬೆಳೆಯಲೆಂದು ಶಾಲಾ ಮುಖ್ಯ ಶಿಕ್ಷಕರು ತಿಳಿಸಿದರು.
ಬ್ಯಾಗ್ ವಿತರಣೆ ಸಂದರ್ಭದಲ್ಲಿ ಅಧ್ಯಕ್ಷರಾದ ದರ್ಶನ್, ಪಿ ಎಸ್ ಐ ಯೋಗೇಶ್ ರವರು, ಶಾಲೆಯ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು ಉಪಸ್ಥಿತರಿದ್ದರು.

ವರದಿ :ಪ್ರಸನ್ನಕುಮಾರ್. ಎಸ್ ಕೊರಟಗೆರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!