ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ : ಅಬ್ದುಲ್ ರಜಾಕ್

ಕೊಪ್ಪಳ : ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳು ಬೆಳಕಿಗೆ ಬರಬೇಕು ಎಂದು ಭಾರತೀಯ ಪೆಂಕಾಕ್ ಸೀಲಾತ್ ಸಂಸ್ಥೆಯ ತಾಂತ್ರಿಕ ನಿರ್ದೇಶಕರಾದ ಅಬ್ದುಲ್ ರಜಾಕ್ ಅವರು ತಿಳಿಸಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಗುರುವಾರದಂದು ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ವಿಜಯಪುರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ 2025-26 ಸಾಲಿನ ಅಂತರ ಮಹಾವಿದ್ಯಾನಿಲಯಗಳ ಪೆಂಕಾಕ್ ಸೀಲಾತ್ ಪಂದ್ಯಾವಳಿ ಹಾಗೂ ವಿಶ್ವವಿದ್ಯಾನಿಲಯ ತಂಡದ ಆಯ್ಕೆ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಅವರು ಮಾತನಾಡಿ ಇಂದು ಕ್ರೀಡಾ ಕ್ಷೇತ್ರದಲ್ಲಿ ಬಹಳಷ್ಟು ಸ್ಪರ್ಧೆ ಇದೆ. ಆದರೆ ಪೆಂಕಾಕ್ ಸೀಲಾತ್ ಕ್ರೀಡೆಯಲ್ಲಿ ಸ್ಪರ್ಧೆ ಕಡಿಮೆ ಇದೆ. ಸ್ವಲ್ಪ ಚೆನ್ನಾಗಿ ಆಟ ಆಡಿದರೆ ಖಂಡಿತ ಬಹುಮಾನ ಪಡೆಯುತ್ತೀರಿ. ಸರಕಾರದಿಂದ ಕ್ರೀಡೆಗಳಿಗೆ ಬರುವ ಅನುದಾನವನ್ನು ಸದುಪಯೋಗ ಪಡೆದುಕೊಂಡು ಕ್ರೀಡೆಗಳ ಮೂಲಕ ಬೆಳೆಕಿಗೆ ಬನ್ನಿ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪ್ರೊ. ಅಲ್ಲಮ ಪ್ರಭು ಬೆಟ್ಟದೂರು ಅವರು ಮಾತನಾಡುತ್ತಾ ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು ವಿದ್ಯಾರ್ಥಿಗಳಲ್ಲಿ ಕ್ರೀಡೆಯ ಮನೋಧರ್ಮ ಬೆಳೆಯಬೇಕು. ಗೆಲ್ಲುವುದು ಸೋಲುವುದು ಮುಖ್ಯವಲ್ಲ. ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ವಿದ್ಯಾರ್ಥಿಗಳು ಕಲೆ, ಸಾಹಿತ್ಯ, ಸಂಗೀತ ಮತ್ತು ಕ್ರೀಡೆಗಳ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಕಾರ್ಯಕ್ರಮದ ಸಂಘಟನೆ ಕಾರ್ಯದರ್ಶಿ ಮತ್ತು ದೈಹಿಕ ಶಿಕ್ಷಣ ಭೋಧಕರಾದ ಪ್ರದೀಪ್ ಕುಮಾರ ಅವರು ಮಾತನಾಡುತ್ತಾ ಕ್ರೀಡೆಗಳ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು. ಕ್ರೀಡೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕು. ಸರಕಾರಿ ಹುದ್ದೆಗಳಲ್ಲಿ ಕ್ರೀಡಾ ಮೀಸಲಾತಿ ಇದೆ. ಇದನ್ನು ವಿದ್ಯಾರ್ಥಿಗಳು ಸದುಪಯೋಗ ಮಾಡಿಕೊಳ್ಳಬೇಕು. ಕ್ರೀಡೆಗಳು ನಮ್ಮನ್ನು ಮಾನಸಿಕವಾಗಿ, ದೈಹಿಕವಾಗಿ ಮತ್ತು ಆರ್ಥಿಕವಾಗಿ ಸದೃಢವಾಗಿಸುತ್ತವೆ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಡಾ. ಗಣಪತಿ ಲಮಾಣಿಯವರು ಮಾತನಾಡುತ್ತಾ ವಿದ್ಯಾರ್ಥಿಗಳು ಹೊಸ ಹೊಸ ಕ್ರೀಡೆಗಳಲ್ಲಿ ಆಸಕ್ತಿಯಿಂದ ಪಾಲ್ಗೊಳ್ಳಬೇಕು. ಆಧುನಿಕ ಕಾಲದಲ್ಲಿ ನಮಗೆ ಕ್ರೀಡೆಗಳು ಬಹಳ ಮುಖ್ಯ. ಇದರಿಂದ ನಮ್ಮ ಅರೋಗ್ಯ ವೃದ್ಧಿ ಆಗುತ್ತದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಬಿ. ಜಿ ಕರಿಗಾರ, ವಿಠಲ ಬಿ ಜಾಬ ಗೌಡರ್, ಎ ಬಸವರಾಜ, ಮಂಜುನಾಥ್ ಅರೇಂಟು ನೂರು, ಗವಿಸಿದ್ದಪ್ಪ ಮುತ್ತಾಳ, ಮಂಜುನಾಥ್ ಗೊಂಡಬಾಳು, ವಿನೋದು, ವಿಶ್ವನಾಥ್ ನಡುಕಟ್ಟಿ, ಶುಭ, ಸುಮಿತ್ರಾ ಹಾಗೂ ಸುಮಯ್ಯ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಡಾ. ಹುಲಿಗೆಮ್ಮ ಅವರು ನಿರೂಪಿಸಿದರು. ಡಾ. ನರಸಿಂಹ ಸ್ವಾಗತಿಸಿ ವಂದಿಸಿದರು. ಕಾಲೇಜಿನ ವಿದ್ಯಾರ್ಥಿನಿಯರು ಪ್ರಾರ್ಥನೆ ಗೀತೆ ಹಾಡಿದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!