ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಸೋಮವಾರ ಮಾ.9ರಂದು ಆದಿ ಜಗದ್ಗುರು ರೇಣುಕಾಚಾರ್ಯ ಜಯಂತಿ ಆಚರಣೆ ಕಾರ್ಯಕ್ರಮ

ಬಳ್ಳಾರಿ / ಕಂಪ್ಲಿ : ವೀರಶೈವ ಧರ್ಮ ಸಂಸ್ಥಾಪಕರಾದ ಆದಿ ಜಗದ್ಗುರು ಶ್ರೀ ರೇಣುಕಾಚಾರ್ಯ ಜಯಂತಿಯನ್ನು ಮಾರ್ಚ್ 09ರಂದು ಕಂಪ್ಲಿ ಪಟ್ಟಣದಲ್ಲಿ ಆಚರಿಸಲಾಗುತ್ತದೆ ಎಂದು ಕಂಪ್ಲಿ ತಾಲ್ಲೂಕು ವೀರಶೈವ ಸಂಘದ ಪ್ರಕಟಣೆ ತಿಳಿಸಿದೆ.

ಪಂಚಲೋಹದ ಆದಿ ಜಗದ್ಗುರು ಶ್ರೀರೇಣುಕಾಚಾರ್ಯರ ಮೂರ್ತಿಯ ಮೆರವಣಿಗೆಯನ್ನು ವೀರಶೈವ ಸಂಘದ ಶಾಲಾವರಣದಿಂದ ಮುತೈದೆಯರ ಕಳಸ ಕನ್ನಡಿ ಸಕಲ ಮಂಗಳ ವಾದ್ಯಗಳು, ವಿವಿಧ ಜಾನಪದ ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ಪಟ್ಟಣದ ಪ್ರಮುಖ ಬೀದಿಯಲ್ಲಿ ಸಾಗಿ ಸಾಂಗತ್ರಯ ಸಂಸ್ಕೃತ ಪಾಠಶಾಲೆಯಲ್ಲಿ ಮುಕ್ತಾಯಗೊಂಡು
ನಂತರ ಧರ್ಮಸಭೆ ನಡೆಯಲಿದ್ದು, ಶ್ರೀಧರಗಡ್ಡೆ ಜಗದ್ಗುರು ಕೊಟ್ಟೂರು ಸ್ವಾಮಿ ಶಾಖ ವಿರಕ್ತ ಮಠದ ಪೂಜ್ಯ ಶ್ರೀ ಮರಿ ಕೊಟ್ಟೂರು ದೇವರು ದಿವ್ಯ ಸಾನಿಧ್ಯ ವಹಿಸಿ ಆರ್ಶೀವಚನ ನೀಡಲಿದ್ದಾರೆ.
ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಟ್ಟಣವೂ ಸೇರಿದಂತೆ ತಾಲ್ಲೂಕಿನ ಎಲ್ಲಾ ಗ್ರಾಮಗಳ ವೀರಶೈವ ಲಿಂಗಾಯತ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಮಾಜ ಬಾಂಧವರು ಆಗಮಿಸಿ ಯಶಸ್ವಿಗೊಳಿಸಬೇಕೆಂದು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!