ಸಿರುಗುಪ್ಪ- ಮುಖ್ಯಮಂತ್ರಿ ಸಿದ್ದರಾಮಯ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಾಂಗ್ರೆಸ್ ನೇತೃತ್ವದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳು ಮಹಿಳೆಯರ ನಿತ್ಯದ ಬದುಕಿಗೆ ತುಂಬಾ ಸಹಕಾರಿಯಾಗಿವೆ ಎಂದು ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಎನ್.ಕರಿಬಸಪ್ಪ ಹೇಳಿದರು
ಸಿರುಗುಪ್ಪ ತಾಲ್ಲೂಕು ಪಂಚಾಯತ್ ಕಾರ್ಯಾಲಯದ ಸಭಾ ಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಮ್ಮಿಕೊಂಡ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡುತ್ತಾ ಕರ್ನಾಟಕ ರಾಜ್ಯದ ಪ್ರತಿಯೊಬ್ಬ ಕಡು ಬಡವರಿಗೆ ಆರ್ಥಿಕವಾಗಿ ಹಿಂದುಳಿದ ಮಹಿಳೆಯರಿಗೆ ಅವರ ಬದುಕಿನ ಜೀವನಕ್ಕೆ ಆಸರೆಯಾಗುವಂತೆ ಉಚಿತ ಸೌಲಭ್ಯಗಳನ್ನು ನೀಡಿ ಮಹಿಳೆಯರಿಗೆ ವೃದ್ಧರಿಗೆ ಹಿರಿಯ ನಾಗರಿಕರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದು ಅವರು ಕರೆ ನೀಡಿದರು
ತಾಲೂಕ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಸದಸ್ಯರಾದ ಎಸ್. ಎಂ. ನಾಗರಾಜ ಸ್ವಾಮಿ ಮಾತನಾಡಿದರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಯೋಜನಾಧಿಕಾರಿ ಜಿ. ಪ್ರದೀಪ್ ಕುಮಾರ್, ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ನಾಗರಹಾಳು ಚನ್ನಬಸವ, ಅಗ್ರಹಾರ ಗೋವಿಂದ, ಹಳೆಕೋಟೆ ವೀರೇಶ್ ನಾಯಕ್, ತೆಕ್ಕಲಕೋಟೆ ಶ್ಯಾಮ್ ಸುಂದರ್, ವರಲಕ್ಷ್ಮಿ, ಕೆಇಬಿ ಜೆಸ್ಕಾಂ ಅಧಿಕಾರಿಗಳು ಕೆ ಎಸ್ ಆರ್ ಟಿ ಸಿ ಅಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು ಮತ್ತಿತರ ಗಣ್ಯರು ಭಾಗವಹಿಸಿದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















