ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶೇಷ ಚೇತನರಿಗೆ ಆಸರೆಯಾದ ಧರ್ಮಸ್ಥಳ ಸಂಸ್ಥೆಯ ಜನಮಂಗಲ ಕಾರ್ಯಕ್ರಮ

ಸಿರುಗುಪ್ಪ ನಗರದ ಸದಾಶಿವನಗರದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ವತಿಯಿಂದ ಜನಮಂಗಲ ಕಾರ್ಯಕ್ರಮದಡಿಯಲ್ಲಿ ವಿಶೇಷ ಚೇತನರಿಗೆ ಮಂಜೂರುಗೊಂಡ ವಾಟರ್‌ ಬೆಡ್‌ನ್ನು ಸದಾಶಿವನಗರದ ದುರುಗಮ್ಮನವರಿಗೆ ತಾಲೂಕಿನ ಕ್ಷೇತ್ರ ಯೋಜನಾಧಿಕಾರಿ ಸುಧೀರ್‌ ಹಂಗಳೂರು ರವರು ವಿತರಿಸಿದರು.

ನಂತರ ಮಾತನಾಡಿದ ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರಾಜ್ಯಾದ್ಯಂತ ಅನೇಕ ಕಾರ್ಯಕ್ರಮಗಳನ್ನು ಅನುಷ್ಠಾನ ಮಾಡಲಾಗುತ್ತಿದೆ ಅದರಲ್ಲೂ ವಿಶೇಷವಾಗಿ ವಿಶೇಷ ಚೇತನರಿಗೆ ಜಲಮಂಗಲ ಕಾರ್ಯಕ್ರಮದಡಿ ವೀಲ್ ಚೇರ್, ಕಮೋಡ್ ಚೇರ್, ಯು ಸೇಫ್ ವಾಕರ್, ತ್ರೀ ಲೆಗ್ ಸ್ಟಿಕ್, ಸಿಂಗಲ್ ಲೆಗ್ ಸ್ಟಿಕ್, ವಾಟರ್ ಬೆಡ್ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು, ತಾಲೂಕಿನಲ್ಲಿ ಈವರೆಗೆ 38 ಲಕ್ಷ ಮೌಲ್ಯದ ಸಲಕರಣೆಗಳನ್ನು ವಿತರಿಸಲಾಗಿದ್ದು ವಿಶೇಷ ಚೇತನರು ಗೌರವಯುತ ಜೀವನ ನಡೆಸಲು ಸಹಕಾರಿಯಾಗಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಊರಿನ ಗಣ್ಯರಾದ ಇನೂಸ್, ವಲಯ ಮೇಲ್ವಿಚಾರಕಿ ರೇಣುಕಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರಿಯಾ, ಸೇವಾ ಪ್ರತಿನಿಧಿ ಅನಿತಾ ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!