ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರೆಸಾರ್ಟ್ ರಾಜಕೀಯ ಶುರು: ಬಿಡದಿಯ ವಂಡರ್ ಲಾ ರೆಸಾರ್ಟ್​ನತ್ತ ಕಾಂಗ್ರೆಸ್ ಶಾಸಕರು

ಬೆಂಗಳೂರು : ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಅಡ್ಡ ಮತದಾನದ ಭೀತಿ ಹೆಚ್ಚಾಗಿರುವ ನಡುವೆ ಕಾಂಗ್ರೆಸ್ ತನ್ನ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ರೆಸಾರ್ಟ್ ರಾಜಕೀಯಕ್ಕೆ ಮುಂದಾಗಿದೆ. ಈ ಹಿನ್ನೆಲೆ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಒಡಿಶಾದ ಕಾಂಗ್ರೆಸ್ ಶಾಸಕರನ್ನು ಬೆಂಗಳೂರಿಗೆ ಕರೆಸಿಕೊಳ್ಳಲಾಗಿದೆ. ಗುರುವಾರ ರಾತ್ರಿ ಭುವನೇಶ್ವರದಿಂದ ಇಂಡಿಗೋ ವಿಮಾನದ ಮೂಲಕ ಒಡಿಶಾದ ಕಾಂಗ್ರೆಸ್ ಶಾಸಕರು ಮತ್ತು ನಾಯಕರು ಬೆಂಗಳೂರಿಗೆ ಆಗಮಿಸಿದರು. ರಾತ್ರಿ ಸುಮಾರು 11 ಗಂಟೆ ವೇಳೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ (ಕೆಐಎಬಿ) ಬಂದ ಶಾಸಕರನ್ನು ಡಿ.ಕೆ ಶಿವಕುಮಾರ್ ಆಪ್ತರು ಸ್ವಾಗತಿಸಿದರು.

ರಾಜ್ಯಸಭೆ ಚುನಾವಣೆ:
ಅಖಾಡಕ್ಕಿಳಿದ ಟ್ರಬಲ್ ಶೂಟರ್ ಡಿಕೆಶಿ
ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ನಡೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಬಿಜೆಪಿಯ ‘ಆಪರೇಷನ್ ಕಮಲ’ ಪ್ರಯತ್ನವನ್ನು ತಡೆಯಲು ಈ ತಂತ್ರ ರೂಪಿಸಲಾಗಿದೆ.

ಕಾಂಗ್ರೆಸ್ ತನ್ನ ಶಾಸಕರನ್ನು ಒಟ್ಟಿಗೆ ಇರಿಸಿ ಪಕ್ಷದ ನಿರ್ಧಾರಕ್ಕೆ ಬದ್ಧರಾಗುವಂತೆ ಮಾಡಲು ಬೆಂಗಳೂರಿಗೆ ಕರೆಸಿಕೊಂಡಿದೆ ಎಂದು ತಿಳಿದುಬಂದಿದೆ. ಇದರಿಂದ ರಾಜ್ಯಸಭಾ ಚುನಾವಣೆಗೆ ಮುನ್ನ ರಾಜಕೀಯ ಚಟುವಟಿಕೆಗಳು ಮತ್ತಷ್ಟು ತೀವ್ರಗೊಂಡಿವೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!