ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಎಲ್.ಪಿ.ಜಿ. ಸಿಲಿಂಡರ್‌ ಬಳಕೆದಾರರೇ “ಗ್ಯಾಸ್‌ ಸಿಲಿಂಡರ್‌ ಸಿಗಲ್ಲ ಎಂಬ ಆತಂಕ ಬೇಡ”

ಬೀದರ್ : ಬೀದರ್ ಜಿಲ್ಲೆಯ ಎಲ್.ಪಿ.ಜಿ. ಬಳಕೆದಾರರಿಗೆ ತಿಳಿಸುವುದೇನೆಂದರೆ, ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದು. ಜಿಲ್ಲೆಯಲ್ಲಿ ಗೃಹ ಬಳಕೆ ಅಡುಗೆ ಅನಿಲ ಸಿಲಿಂಡರ್‌ ಗಳು ಸಾಕಷ್ಟು ಪ್ರಮಾಣದಲ್ಲಿ ಸದ್ಯ ದಾಸ್ತಾನು ಲಭ್ಯವಿರುವುದರಿಂದ ಗ್ರಾಹಕರ ಯಾರು ಗಾಬರಿಗೊಳ್ಳಬಾರದೆಂದು ಹಾಗೂ ಹೆಚ್ಚುವರಿಯಾಗಿ ದಾಸ್ತಾನು ಮಾಡಿಕೊಳ್ಳಬಾರದೆಂದು ತಿಳಿಯಪಡಿಸಿದೆ ಹೆಚ್ಚಿನ ಗ್ರಾಹಕರು ಮುಂಚಿತವಾಗಿ ಬುಕಿಂಗ್‌ ಮಾಡುತ್ತಿರುವುದರಿಂದ ಐವಿಆ‌ರ್ಎಸ್/ಮಿಸ್ಡ್ ಕಾಲ್ ಮಾಡುವ ವ್ಯವಸ್ಥೆಯಲ್ಲಿ ಹೆಚ್ಚಿನ ಸಂಚಾರ ದಟ್ಟನೆ ಉಂಟಾಗಿ ಸದರಿ ಸಿಸ್ಟಮ್ ಗಳು ಕಾರ್ಯ ನಿರ್ವಹಿಸುತ್ತಿಲ್ಲವಾದ್ದರಿಂದ ಪರ್ಯಾಯವಾಗಿ IOCL, HPCL ಮತ್ತು BPCL ಎಲ್‌ಪಿಜಿ ತೈಲ ಕಂಪನಿಗಳ ವಾಟ್ಸ್ಆಪ್ ನಂಬರ್ ಮುಖಾಂತರ ಸಹ ಬುಕ್ಕಿಂಗ್ ಮಾಡಬಹುದು.
ದಿನಾಂಕ.11-03-2026ರಂದು ಜಿಲ್ಲೆಯ ಗ್ಯಾಸ್ ಏಜೆನ್ಸಿದಾರರ ಮತ್ತು ಹೋಟೆಲ್ ಉದ್ಯಮಿದಾರರ
ಸಭೆಯನ್ನು ನಡೆಸಲಾಯಿತು.
ಸಭೆಯಲ್ಲಿ ವಾಣಿಜ್ಯ ಸಿಲಿಂಡರ್‌ಗಳ ಲಭ್ಯತೆಯ ಬಗ್ಗೆ ಚರ್ಚಿಸಲಾಗಿ ಹೋಟೆಲ್‌ಗಳಲ್ಲಿ ಲಭ್ಯವಿರುವ ಸಿಲಿಂಡರ್‌ಗಳನ್ನು ಅಗತ್ಯತೆಯ ಪ್ರಮಾಣದಲ್ಲಿ ಬಳಸಲು ಮತ್ತು ಗ್ಯಾಸ್ ಏಜೆನ್ಸಿ ಬಳಿ ಸ್ಟಾಕ್ ಇರುವ ವಾಣಿಜ್ಯ ಸಿಲಿಂಡರ್‌ಗಳನ್ನು ಅವಶ್ಯಕತೆ ಅನುಗುಣವಾಗಿ ಹೋಟೆಲುಗಳಿಗೆ
ಸರಬರಾಜು ಮಾಡಲು ಸೂಚಿಸಲಾಯಿತು. ಯಾರು ಅನಗತ್ಯವಾಗಿ ಹೆಚ್ಚಿನ ಸಿಲಿಂಡರನ್ನು ಸಂಗ್ರಹಣೆ ಮತ್ತು
ಮಾರ್ಗಾಂತರ ಮಾಡಬಾರದೆಂದು ತಿಳಿಸಿ. ಅಂತಹ ಪ್ರಕರಣಗಳು ಕಂಡು ಬಂದರೆ ಅಗತ್ಯ ವಸ್ತುಗಳ ಕಾಯ್ದೆ
1955 ರಡಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸೂಚಿಸಲಾಯಿತು. ಈ ಎಲ್ಲಾ ವಿಷಯಗಳನ್ನು
ಜಿಲ್ಲೆಯ ಗ್ರಾಹಕರ ಗಮನಕ್ಕೆ ತರುತ್ತಾ ಜಿಲ್ಲೆಯಲ್ಲಿ ಎಲ್.ಪಿ.ಜಿ ಸಿಲಿಂಡ‌ರ್ ಗಳ ಕೊರತೆ ಇರುವುದಿಲ್ಲವಾದ್ದರಿಂದ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ಹರಿದಾಡುತ್ತಿರುವ ಸುಳ್ಳು ವದಂತಿಗಳಿಗೆ ಸಾರ್ವಜನಿಕರು ಕಿವಿಗೊಡಬಾರದೆಂದು ಈ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಯಪಡಿಸಿದೆ.

ವರದಿ : ಶ್ರೀನಿವಾಸ ಬಿರಾದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!