ಶಿವಮೊಗ್ಗ ಗ್ರಾಮಾಂತರ ತಾಲೂಕಿನ ಹೊಳೆಹೊನ್ನೂರು ಪಟ್ಟಣ ಪಂಚಾಯಿತಿಯಲ್ಲಿ ನೂತನವಾಗಿ ನಿರ್ಮಿಸಿರುವ “ಇಂದಿರಾ ಕ್ಯಾಂಟೀನ್” ನ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವರು,ಸೊರಬ ಕ್ಷೇತ್ರದ ಶಾಸಕರು ಹಾಗೂ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರು ಶ್ರೀ ಮಧು ಬಂಗಾರಪ್ಪನವರು ನೆರವೇರಿಸಿ, ಮುಖಂಡರುಗಳೊಂದಿಗೆ ಉಪಹಾರ ಸವಿದರು.
ಬಳಿಕ ವೇದಿಕೆ ಕಾರ್ಯಕ್ರಮದಲ್ಲಿ ಇಂದಿರಾ ಕ್ಯಾಂಟೀನ್ ಯೋಜನೆಯ ಮೂಲ ಉದ್ದೇಶ ಹಸಿವು ಮುಕ್ತ ಕರ್ನಾಟಕ ಮಾಡುವುದಾಗಿದ್ದು, ರಿಯಾಯಿತಿ ದರದಲ್ಲಿ ಸ್ವಾದಿಷ್ಟ ತಿಂಡಿ, ಊಟ ದೊರೆಯುವ ಇಂದಿರಾ ಕ್ಯಾಂಟೀನ್ ಯೋಜನೆಯ ಸಂಪೂರ್ಣ ಸದುಪಯೋಗವನ್ನು ಪಡೆದುಕೊಳ್ಳುವಂತೆ ತಿಳಿಸಿದರು.
ಈ ವೇಳೆ ಶಾಸಕರಾದ ಶ್ರೀಮತಿ ಶಾರದಾ ಪೂರ್ಯನಾಯ್ಕ್, ಜಿಲ್ಲಾಧಿಕಾರಿ ಶ್ರೀ ಪ್ರಭುಲಿಂಗ ಕವಳಿಕಟ್ಟಿ ಸೇರಿದಂತೆ ಜನಪ್ರತಿನಿಧಿಗಳು, ಮುಖಂಡರುಗಳು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಕೊಡಕ್ಕಲ್ ಶಿವಪ್ರಸಾದ್




















