
ಬೆಂಗಳೂರು : ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣ ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧ್ಯಕ್ಷರಾದ ಕಿರಣ್ ಕುಮಾರ್ ರವರ ನೇತೃತ್ವದಲ್ಲಿ ಇಂದು ಕನ್ನಡ ಶಾಲೆ ಉಳಿಸಿ ಬೆಳೆಸಿ ಎಂಬ ಅಭಿಯಾನದ ಅಡಿಯಲ್ಲಿ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯ ಮಕ್ಕಳಿಗೆ ಡೆಸ್ಕ್ ಮತ್ತು ಮಕ್ಕಳಿಗೆ ಪರೀಕ್ಷೆಗೆ ಅವಶ್ಯಕತೆ ಇರುವ ಉಪಕರಣಗಳನ್ನು ವಿತರಿಸಿ ಮಕ್ಕಳ ಮುಂದಿನ ಭವಿಷ್ಯ ಉಜ್ವಲವಾಗಿರಲಿ ಎಂದು ಸಿಹಿ ವಿತರಿಸುವ ಮೂಲಕ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿ ಅಧ್ಯಕ್ಷರಾದ ಶಿವುಗೌಡ ರವರು ಯುವ ಘಟಕದ ಜಿಲ್ಲಾಧ್ಯಕ್ಷರಾದ ಸ್ವಾಮಿರವರು ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಘು, ಯುವ ಘಟಕದ ಜಿಲ್ಲಾ ಕಾರ್ಯದರ್ಶಿ ಬಸವರಾಜು, ಯುವ ಘಟಕದ ತಾಲ್ಲೂಕು ಪ್ರಧಾನ ಕಾರ್ಯದರ್ಶಿಗಳಾದ ಲಕ್ಷ್ಮಿ ನರಸಿಂಹ ನಾಯಕ್, ಕಾರ್ತಿಕ್, ಪ್ರದೀಪ್,ಸುದೀ, ದೇವರಾಜು, ಅಚ್ಚುಥ್ , ಶೇಖರ್, ಶೇಷಗಿರಿ ಭಾಗವಹಿಸಿದರು.
ವರದಿ ಪ್ರಿತುನ್ ಎ.ಪಿ




















