ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಡಿಕೇರಿಯ ಪ್ರಸಿದ್ಧ ಎಮ್ಮೆಮಾಡು ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಿಗೆ ಆಹ್ವಾನ

ಕೊಡಗು : ಎಮ್ಮೆಮಾಡುವಿನಲ್ಲಿ ಪ್ರತಿ ವರ್ಷ ನಡೆಯುವ ಉರುಸ್ ಕಾರ್ಯಕ್ರಮಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರನ್ನು ಅಧಿಕೃತವಾಗಿ ಆಹ್ವಾನಿಸಲಾಯಿತು.
ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ನೇತೃತ್ವದಲ್ಲಿ ತಾಜಲ್ ಇಸ್ಲಾಂ ಮುಸ್ಲಿಂ ಜಮಾತ್ ಅಧ್ಯಕ್ಷರಾದ ಕೆ.ಎಂ ಹುಸೇನ್ ಶಾಫಿ, ಮಾಜಿ ಅಧ್ಯಕ್ಷರಾದ ಅಬೂಬಕರ್ ಸಕಾಪಿ, ಆಡಳಿತ ಮಂಡಳಿ ಸದಸ್ಯರಾದ ಮೆನ್ ಮಹಮ್ಮದ್, ಹನೀಫ್ ಎಮ್.ಎ ಹಾಗೂ ಧರ್ಮ ಗುರುಗಳು ಆಹ್ವಾನ ಪತ್ರಿಕೆಯನ್ನು ನೀಡಿ ಉರುಸ್ ಸಮಾರಂಭಕ್ಕೆ ಆಹ್ವಾನಿಸಿದರು.
ಎಮ್ಮೆಮಾಡು ಉರುಸ್ ಪ್ರಾಮುಖ್ಯತೆ ಬಗ್ಗೆ ಮಾನ್ಯ ಮುಖ್ಯಮಂತ್ರಿಗಳಿಗೆ ವಿವರಿಸಿದ ಮಾನ್ಯ ಶಾಸಕರು, ಸುಮಾರು 400 ವರ್ಷಕ್ಕೂ ಅಧಿಕ ಇತಿಹಾಸ ಇರುವ ಈ ಉತ್ಸವಕ್ಕೆ ಕರ್ನಾಟಕ ಮಾತ್ರವಲ್ಲದೇ ನೆರೆಯ ರಾಜ್ಯಗಳಿಂದ ಎಲ್ಲಾ ಧರ್ಮದ ಭಕ್ತರು ಆಗಮಿಸಿ ಪ್ರಾರ್ಥಿಸುತ್ತಾರೆ ಎಂದು ವಿವರಿಸಿದರು.
ಇದೇ ಸಂದರ್ಭದಲ್ಲಿ ಮಾನ್ಯ ಸಭಾಪತಿಗಳಾದ ಯು.ಟಿ ಖಾದರ್, ಅಲ್ಪಸಂಖ್ಯಾತ ಸಚಿವರಾದ ಜಮೀರ್ ಅಹ್ಮದ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಝೀರ್ ಅಹಮದ್, ಶಾಂತಿನಗರ ಶಾಸಕರಾದ ಎನ್.ಎ ಹ್ಯಾರೀಸ್ ಮತ್ತು ಮಡಿಕೇರಿ ಶಾಸಕರಾದ ಡಾ. ಮಂಥರ್ ಗೌಡರನ್ನು ಆಹ್ವಾನಿಸಲಾಯಿತು.

✍️ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!