ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಂಜನಿ ರಾಘವನ್ ನಿರ್ದೇಶನದ ‘ಢಿ ಢಿ ಢಿಕ್ಕಿ’ ಚಿತ್ರಕ್ಕೆ ʼನೆನಪಿರಲಿ’ ಪ್ರೇಮ್ ನಾಯಕ ಕಂಪ್ಲಿಯ ರೆಗ್ಯುಲೆಟರ್ ಕ್ಯಾಂಪ್ ನ ಜಡೇಶ್ ಕೆ. ಹಂಪಿರವರ ನಿರ್ಮಾಣ

ಬಳ್ಳಾರಿ / ಕಂಪ್ಲಿ : ಗುರು ಶಿಷ್ಯರು”, “ಲ್ಯಾಂಡ್‌ ಲಾರ್ಡ್” ಚಿತ್ರಗಳ ನಿರ್ದೇಶಕ ಹಾಗೂ “ಕಾಟೇರ” ಚಿತ್ರದ ಲೇಖಕ ಜಡೇಶ್ ಹಂಪಿ ಅವರ ಹಂಪಿ ಪಿಕ್ಚರ್ಸ್ ಹಾಗೂ ರಾಮಕೃಷ್ಣ ಹಾಗೂ ಆನಂದ್ ಕುಮಾರ್ ನೇತೃತ್ವದ R K & A k ಎಂಟರ್ಟೈನ್ಮೆಂಟ್ ಸಂಸ್ಥೆ ನಿರ್ಮಾಣದ, ಕಲಾವಿದೆಯಾಗಿ ಜನಪ್ರಿಯರಾಗಿರುವ ರಂಜನಿ ರಾಘವನ್ ಮೊದಲ ಬಾರಿಗೆ ನಿರ್ದೇಶನ ಮಾಡುತ್ತಿರುವ ಹಾಗೂ “ನೆನಪಿರಲಿ” ಪ್ರೇಮ್ ನಾಯಕರಾಗಿ ನಟಿಸುತ್ತಿರುವ ಚಿತ್ರ “ಡಿಡಿ ಢಿಕ್ಕಿ”.

ಗೋಲ್ಡನ್ ಸ್ಟಾರ್ ಗಣೇಶ್ ಅವರ ಪುತ್ರ ಮಾಸ್ಟರ್ ವಿಹಾನ್ ಕೂಡ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸುತ್ತಿದ್ದಾರೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ.

ಲೆಜೆಂಡ್ ಇಳಯರಾಜ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರಕ್ಕೆ ಸುಧಾಕರ್ ಅವರ ಛಾಯಾಗ್ರಹಣವಿದೆ. ಕೆ.ಎಂ.ಪ್ರಕಾಶ್ ಸಂಕಲನವಿರುವ “ಡಿಡಿ ಢಿಕ್ಕಿ” ಚಿತ್ರಕ್ಕೆ ತರುಣ್ ಸುಧೀರ್ ಕ್ರಿಯೇಟಿವ್ ಹೆಡ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಮೇ ತಿಂಗಳಲ್ಲಿ ಬಿಡುಗಡೆ ಸಾಧ್ಯತೆ.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!