ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅರುವತೊಕ್ಲು ಗ್ರಾಮಕ್ಕೆ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭೇಟಿ

ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕಿನ ಅರುವತೊಕ್ಲು ಗ್ರಾಮಕ್ಕೆ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಇಂದು ಭೇಟಿ ನೀಡಿದರು.

ಅಧಿವೇಶನಕ್ಕೆ ಹಬ್ಬದ ಪ್ರಯುಕ್ತ ಬಿಡುವು ಇರುವ ಕಾರಣ ಬೆಂಗಳೂರಿಂದ ನೇರ ಕ್ಷೇತ್ರಕ್ಕೆ ಆಗಮಿಸಿದ ಮಾನ್ಯ ಶಾಸಕರು, ಈ ಭಾಗದಲ್ಲಿ ಈ ಹಿಂದೆ ತಮ್ಮ ಅನುದಾನದಲ್ಲಿ ಕೈಗೊಂಡ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದರು.
ಅರುವತೊಕ್ಲು ಗ್ರಾಮದ ಮೈಸೂರಮ್ಮ ನಗರಕ್ಕೆ, ಗೋಣಿಕೊಪ್ಪ ಬೈಪಾಸ್ ನಿಂದ ತೆರಳುವ ರಸ್ತೆಗೆ ₹ 18 ಲಕ್ಷಗಳಲ್ಲಿ ಕೈಗೊಂಡ ಕಾಮಗಾರಿಯ ಲೋಕಾರ್ಪಣೆ ಮಾಡಿದ ಬಳಿಕ, ₹ 15 ಲಕ್ಷಗಳಲ್ಲಿ ನಿರ್ಮಾಣಗೊಂಡ ಕಾಡ್ಲ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳುವ ರಸ್ತೆಯ ಉದ್ಘಾಟನೆಯನ್ನು ನೆರವೇರಿಸಿದರು.
ಬಳಿಕ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ತೆರಳಿದ ಮಾನ್ಯ ಶಾಸಕರು ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದರು.
ಇದೇ ಸಂದರ್ಭದಲ್ಲಿ ಶಾಸಕರ ಅನುದಾನದ ₹ 3.50 ಲಕ್ಷದಲ್ಲಿ, ಕಾಡ್ಯಮಾಡ ಐನ್ ಮನೆಗೆ ತೆರಳುವ ಓಣಿಗೆ ನಿರ್ಮಾಣಗೊಂಡ ಮೆಟ್ಟಲುಗಳನ್ನು ಮಾನ್ಯ ಶಾಸಕರು ನಿರ್ಮಿಸಿಕೊಟ್ಟಿರುತ್ತಾರೆ. ಐನ್ ಮನೆ ಪ್ರಮುಖರು ನೀಡಿದ ಆತಿಥ್ಯವನ್ನು ಮಾನ್ಯ ಶಾಸಕರು ಸ್ವೀಕರಿಸಿದರು.
ಈ ಕಾರ್ಯಕ್ರಮಕ್ಕೆ ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಮಿದೇರಿರ ನವೀನ್, ಬ್ಲಾಕ್ ಅಧ್ಯಕ್ಷೆ ಮುಕಳೇರ ಆಶಾ ಪೂಣಚ್ಚ, ವಲಯ ಅಧ್ಯಕ್ಷರು ಯಶ್ವಿನ್, ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷರು ಟಾಟು ಮೊಣ್ಣಪ್ಪ, ಗೋಣಿಕೊಪ್ಪಲು ಗ್ರಾಮ ಪಂಚಾಯಿತಿ ಅಧ್ಯಕ್ಷರು ಶ್ರೀ ಕುಲಚಂಡ ಪ್ರಮೋದ್ ಗಣಪತಿ, ಉಪಾಧ್ಯಕ್ಷರು ಮಂಜುಳಾ, ಪೊನ್ನಪೇಟೆ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಶ್ರೀ ಎ ಜೆ ಬಾಬು, ಕೊಡಗು ಜಿಲ್ಲಾ ಕಾಂಗ್ರೆಸ್ ಪಕ್ಷದ ಯುವ ಅಧ್ಯಕ್ಷರು ಜಮ್ಮಡ ಸೋಮಣ್ಣ, ದೇವಸ್ಥಾನ ಅಧ್ಯಕ್ಷರು ಉತ್ತಯ್ಯ, ಕಂದ ದೇವಯ್ಯ, ಮುತ್ತಣ್ಣ, ಜಮ್ಮಡ ಮೋಹನ್, ನಂದ, ಚೇತನ್, ಬಿಎಲ್ಎ ಲಾಲು ಸ್ಟಾಲಿನ್, ಡಾಡು ಜೋಸೆಫ್, ಅಜ್ಜಿಕುಟ್ಟಿರ ಪೊನ್ನು ಗಿರೀಶ್, ಸಾಜಿ ಅಚ್ಚುತನ್, ದಿಲ್ಲು, ಗ್ರಾಮದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾದ ಝರೀನಾ, ಮೇರಿ, ಗುತ್ತಿಗೆದಾರರು ಚೇರಂಡ ಮೋಹನ್ ಕುಶಲಪ್ಪ, ಮುತ್ತಪ್ಪ, ಶ್ರೀ ಆಶೀರ್ವಾದ ಮುತ್ತಪ್ಪ ಸೇವಾ ಸಮಿತಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯ ಕಿರಿಯ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಲವದರಿ : ಪ್ರಿತುನ್ ಪೂವಣ್ಣ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!