ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮುಖಂಡರೊಂದಿಗೆ ಪೂರ್ವಭಾವಿ ಸಿದ್ಧತಾ ಸಭೆ

ಸಿರುಗುಪ್ಪ : ಮಾ. 23 ದೇವರ ದಾಸಿಮಯ್ಯ ಜಯಂತಿ ಮಾ. 28 ಅಗ್ನಿ ಬನ್ನಿರಾಯ ಜಯಂತಿ ಮಾ.31 ಭಗವಾನ್ ಮಹಾವೀರ ಜಯಂತಿ ಮಹನೀಯರ ಅರ್ಥಪೂರ್ಣವಾಗಿ ಜಯಂತಿಗಳನ್ನು ಆಚರಿಸಿ ತಹಶೀಲ್ದಾರ್ ಗೌಸಿಯಾ ಬೇಗಂ

ಸಿರುಗುಪ್ಪ – ತಾಲೂಕು ಕೇಂದ್ರದಲ್ಲಿ ಮಹನೀಯರ ಜಯಂತಿ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಆಚರಿಸಬೇಕು ಎಂದು ತಹಶೀಲ್ದಾರ್ ಗೌಸಿಯಾ ಬೇಗಂ ಅವರ ನೇತೃತ್ವದಲ್ಲಿ ಉಪ ತಹಶೀಲ್ದಾರ್ ಸಿದ್ದಾರ್ಥ ಕಾರಂಜಿ ಅವರು ತಾಲೂಕು ಕಚೇರಿ ಸಭಾಂಗಣದಲ್ಲಿ ಮಹನೀಯರ ಜಯಂತಿ ಕುರಿತು ಅಧಿಕಾರಿಗಳು ಸಮುದಾಯದ ಮುಖಂಡರೊಂದಿಗೆ ಏರ್ಪಡಿಸಿದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕರ್ನಾಟಕ ಸರ್ಕಾರ ತಾಲೂಕು ಆಡಳಿತ ತಾಲೂಕು ಪಂಚಾಯತ್ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಮಾಜ ಕಲ್ಯಾಣ ಇಲಾಖೆ ನಗರಸಭೆ ಎಲ್ಲಾ ಇಲಾಖೆಗಳಿಂದ ಮಾರ್ಚ್ 23 ರಂದು ದೇವರ ದಾಸಿಮಯ್ಯ ಜಯಂತಿ, ಮಾರ್ಚ್ 28 ರಂದು ಅಗ್ನಿ ಬನ್ನಿರಾಯ ಜಯಂತಿಯನ್ನು,ಮಾರ್ಚ್ 31 ಭಗವಾನ್ ಮಹಾವೀರರ ಜಯಂತಿಯನ್ನು ಈ ಎಲ್ಲಾ ಮಹನೀಯರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸೋಣ ಇದಕ್ಕೆಲ್ಲ ವೇದಿಕೆ ಕಾರ್ಯಕ್ರಮ ಆಯೋಜಿಸಲಾಗುವುದು ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದರು. ಕಾರ್ಯಕ್ರಮದ ವೇದಿಕೆಯಲ್ಲಿ ಬ್ಯಾನರ್ ಅಳವಡಿಸಲು ಅವಕಾಶವಿದೆ ನಗರದ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಬ್ಯಾನರ್ ಹಾಕುವುದನ್ನು ನಿರ್ಬಂಧಿಸಲಾಗಿದೆ ಶಾಂತಿ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಶ್ರದ್ಧಾ ಭಕ್ತಿ ಭಾವದಿಂದ ಮಹನೀಯರ ಜಯಂತಿ ಆಚರಿಸೋಣ ಅದಕ್ಕೆ ಎಲ್ಲರ ಸಹಕಾರ ಅಗತ್ಯವಿದೆ ಶಿಷ್ಟಾಚಾರದಂತೆ ಆಹ್ವಾನ ಪತ್ರಿಕೆ ಮುದ್ರಿಸಿ ಗಣ್ಯರಿಗೆ ಸಂಘ ಸಂಸ್ಥೆಗಳ ಪದಾಧಿಕಾರಿಗಳಿಗೆ ವಿತರಿಸಿ ಕಾರ್ಯಕ್ರಮಕ್ಕೆ ಆಹ್ವಾನಿಸಬೇಕು ಮಹನೀಯರ ಆಚಾರ ವಿಚಾರಗಳನ್ನು ಪರಿಣತರಿಂದ ವಿಶೇಷ ಉಪನ್ಯಾಸ ಮೂಲಕ ತಲುಪಿಸಲು ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಬೇಕು ಕಾರ್ಯಕ್ರಮಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು. ತಾಲೂಕ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಸಮಾಜ ಕಲ್ಯಾಣ ಇಲಾಖೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕೃಷಿ ತೋಟಗಾರಿಕೆ ನಗರಸಭೆ ಎಲ್ಲಾ ಇಲಾಖೆಗಳ ಅಧಿಕಾರಿಗಳು ಬಿ. ಸತ್ಯನಾರಾಯಣ, ಗೋಪಾಲಕೃಷ್ಣ, ಶರಣಪ್ಪ, ಶೇಖರ್, ಡಿ.ಬಿ.ಬಸಪ್ಪ, ಬಿ. ರಮೇಶ್, ರುದ್ರಪ್ಪ, ವೆಂಕಟೇಶ್, ಅಗ್ನಿಶಾಮಕ ದಳದ ಚಂದ್ರಣ್ಣ,ಅಬಕಾರಿ ಉರುಕುಂದಪ್ಪ,ಇಲಾಖೆಯ ಅಧಿಕಾರಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಶಾಂತಿ ಸಭೆ ಸದಸ್ಯರು ಸಮಾಜ ಸುಧಾರಕ ಅಬ್ದುಲ್ ನಬಿ ದೇವರ ದಾಸಿಮಯ್ಯ ಅಗ್ನಿ ಬನ್ನಿರಾಯ ಭಗವಾನ್ ಮಹಾವೀರ ಸಮುದಾಯದ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು ಮುಖಂಡರು ಇದ್ದರು.

ವರದಿ : ಮಸೀದಿ.ಅಬ್ದುಲ್ ಗೌಸ್. ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!