ತುಮಕೂರು :ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಮಲ್ಲಿಕಾರ್ಜುನ್
ತಮ್ಮ ಕಚೇರಿಯಲ್ಲಿ ಶುಕ್ರವಾರ ಸಂಜೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಪಾವಗಡ ಪಟ್ಟಣದ ಆಪ್ ಬಂಡೆಯಲ್ಲಿರುವ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೂ ಮುನ್ನ ಮೇಲಾಧಿಕಾರಿಗಳ ಕಿರುಕುಳವೇ ಸಾವಿಗೆ ಕಾರಣವೆಂದು ವಿಡಿಯೋ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ವೀಡಿಯೋದಲ್ಲಿ ತುಮಕೂರು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಕೃಷ್ಣಪ್ಪ ಕಿರುಕುಳ ಕಾರಣ ಎಂದು ಉಲ್ಲೇಖಿಸಲಾಗಿದೆ.
ಆತ್ಮಹತ್ಯೆಗೂ ಮುನ್ನ ವಿಡಿಯೋ ಮಾಡಿ ಸಹೋದ್ಯೋಗಿಗಳಿಗೆ ಕಳಿಸಿದ್ದಾರೆ.
ಕಳೆದ 3 ವರ್ಷಗಳಿಂದ ಪಾವಗಡ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಲ್ಲಿಕಾರ್ಜುನ್ ಇನ್ನು ಒಂದೇ ವಾರದಲ್ಲಿ ಇವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು.
ಸದ್ಯ ಮಗನ ಮುಂದೆ ಮಲ್ಲಿಕಾರ್ಜುನ್ ತಾಯಿ ಆಕ್ರಂದನ ಮುಗಿಲು ಮುಟ್ಟಿದೆ
ಇವರು ಮೂಲತಃ ಪಾವಗಡ ತಾಲ್ಲೂಕಿನ ಗುಂಡರ್ಲಾಹಳ್ಳಿ ಗ್ರಾಮದವರು.
ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.
ವರದಿ ದಿನೇಶ್ ಕೆ.




















