ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬದಲಾಗುತ್ತಿರುವ ಜೀವನಶೈಲಿ: ಯುವಕರ ಆರೋಗ್ಯಕ್ಕೆ ಎಚ್ಚರಿಕೆಯ ಘಂಟೆಖ್ಯಾತ ಹೃದ್ರೋಗ ತಜ್ಞ ಮತ್ತು ಸಂಸದ ಡಾ. ಸಿ. ಎನ್. ಮಂಜುನಾಥ್ ಕಳವಳ

ಬೆಂಗಳೂರು: ಬದಲಾಗುತ್ತಿರುವ ಜೀವನಶೈಲಿ, ಅತಿಯಾದ ಒತ್ತಡದ ಜೀವನ, ನಿಯಮವಿಲ್ಲದ ಆಹಾರ ಪದ್ಧತಿ, ವ್ಯಾಯಾಮದ ಕೊರತೆ ಮತ್ತು ನಿರಂತರ ಮಾನಸಿಕ ಒತ್ತಡ ಇವೆಲ್ಲವೂ ಯುವಕರ ಆರೋಗ್ಯವನ್ನು ನಿಧಾನವಾಗಿ ಕುಗ್ಗಿಸುತ್ತಿವೆ. ಹೃದಯಾಘಾತ ಮತ್ತು ಸ್ಟ್ರೋಕ್ ಮುಂತಾದ ಗಂಭೀರ ಸಮಸ್ಯೆಗಳು ಈಗ ಕೇವಲ ವಯೋವೃದ್ಧರಿಗೆ ಮಾತ್ರ ಸೀಮಿತವಾಗಿಲ್ಲ; ಯುವಕರಲ್ಲೇ ಈ ಸಂಖ್ಯೆ ಹೆಚ್ಚುತ್ತಿರುವುದು ಕಳವಳದ ಸಂಗತಿಯೆಂದು ಖ್ಯಾತ ಹೃದ್ರೋಗ ತಜ್ಞ ಮತ್ತು ಸಂಸದ ಡಾ. ಸಿ. ಎನ್. ಮಂಜುನಾಥ್ ರವರು ಅಭಿಪ್ರಾಯಪಟ್ಟರು.

ಶ್ರೀಯುತರು ಬೆಂಗಳೂರಿನ ನಿಮ್ಹಾನ್ಸ್ ಕನ್ವೆನ್ಷನ್ ಸೆಂಟರ್‌ನಲ್ಲಿ ಕೆನರಾ ಬ್ಯಾಂಕ್ ನಿವೃತ್ತ ಅಧಿಕಾರಿಗಳ ಸಂಘದ ೧೩ನೇ ತ್ರೈವಾರ್ಷಿಕ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಒಂದು ದಶಕದ ಹಿಂದೆ ಯುವಕರು ತಮ್ಮ ವೃದ್ಧ ತಂದೆ-ತಾಯಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದರು. ಆದರೆ ಈಗ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದೆ; ವೃದ್ಧ ತಂದೆ-ತಾಯಿಗಳು ತಮ್ಮ ಯುವ ಮಕ್ಕಳನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿರುವುದು ನಮ್ಮ ಕಣ್ಣಿಗೆ ಕಾಣುತ್ತಿದೆ. ಇದು ಕೇವಲ ಒಂದು ಬದಲಾವಣೆ ಅಲ್ಲ, ಒಂದು ಎಚ್ಚರಿಕೆಯ ಘಂಟೆ ಎಂದರು.

ಇಸ್ರೇಲ್–ಅಮೆರಿಕಾ ಮತ್ತು ಇರಾನ್ ನಡುವಿನ ಸಂಘರ್ಷವು ರಾಸಾಯನಿಕ ಯುದ್ಧವಾಗಿ ಪರಿಣಮಿಸುವ ಸಾಧ್ಯತೆ ಇದ್ದು, ಹೀಗೆ ಮುಂದುವರಿದಲ್ಲಿ ಭಾರತ ಸೇರಿದಂತೆ ಹಲವು ರಾಷ್ಟ್ರಗಳ ಆರ್ಥಿಕ ವ್ಯವಸ್ಥೆ ಹಾಗೂ ಅಗತ್ಯ ವಸ್ತುಗಳ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ. ಜಗತ್ತಿನ ಒಳಿತಿಗಾಗಿ ರಾಷ್ಟ್ರಗಳ ಪರಸ್ಪರ ಒಪ್ಪಂದದ ಮೂಲಕ ಯುದ್ಧವನ್ನು ನಿಲ್ಲಿಸಬೇಕಿದೆ ಎಂದರು.

ಈ ಸಂದರ್ಭದಲ್ಲಿ ಕೆನರಾ ಬ್ಯಾಂಕಿನ ಕಾರ್ಯ ನಿರ್ವಾಹಕ ನಿರ್ದೇಶಕ ಎಸ್. ಕೆ. ಮಜುಂದಾರ್, ಕೆನರಾ ಬ್ಯಾಂಕಿನ ಮಾನವ ಸಂಪನ್ಮೂಲ ವಿಭಾಗದ ಮಹಾಪ್ರಬಂಧಕ ಕೆ. ವಿ. ರಮಣ ಮೂರ್ತಿ, ಕೆನರಾ ಬ್ಯಾಂಕ್ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಕೆ. ರವಿ ಕುಮಾರ್, ಸಂಘದ ಅಧ್ಯಕ್ಷ ಎ. ಎನ್. ಕೃಷ್ಣ ಮೂರ್ತಿ, ಹಾಗೂ ಮಾಜಿ ಪ್ರಧಾನ ಕಾರ್ಯದರ್ಶಿ ಸುಧಾಕರ್ ಶೆಟ್ಟಿ ಸೇರಿದಂತೆ ಮತ್ತಿತರರು ನಿವೃತ್ತ ಉದ್ಯೋಗಿಗಳನ್ನು ಉದ್ದೇಶಿಸಿ ಮಾತನಾಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಜೆ. ಎಸ್. ಜಗದೀಶ್ ರವರು ಮಾತನಾಡಿ, ಎರಡು ದಿನಗಳ ಸಮ್ಮೇಳನದಲ್ಲಿ ದೇಶಾದ್ಯಂತ ೧೮೦೦ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದರು. ಎರಡು ದಿನಗಳ ಕಾಲ ನಡೆದ ಸಮ್ಮೇಳನದಲ್ಲಿ ಪಿಂಚಣಿದಾರರು ಮತ್ತು ಕುಟುಂಬ ಪಿಂಚಣಿದಾರರ ಮೇಲೆ ಪರಿಣಾಮ ಬೀರುವ ವಿವಿಧ ವಿಷಯಗಳ ಕುರಿತು ಚರ್ಚೆಗಳು ನಡೆಯಿತು. ದೀರ್ಘಕಾಲದಿಂದ ಬಾಕಿ ಉಳಿದಿರುವ ಪಿಂಚಣಿ ಪರಿಷ್ಕರಣೆ ಮತ್ತು ಎಲ್ಲಾ ಪಿಂಚಣಿದಾರರು, ಕುಟುಂಬ ಪಿಂಚಣಿದಾರರಿಗೆ ಕೇಂದ್ರ ಸರ್ಕಾರದ ಆರೋಗ್ಯ ಯೋಜನೆಯ ಮಾದರಿಯಲ್ಲಿ ಕೈಗೆಟುಕುವ ಆರೋಗ್ಯ ಯೋಜನೆಯ ವಿಸ್ತರಣೆ ಕುರಿತೂ ಚರ್ಚಿಸಲಾಯಿತು.

ಸಮ್ಮೇಳನದ ಸ್ವಾಗತ ಸಮಿತಿಯ ಅಧ್ಯಕ್ಷ ಡಿ. ವಿಜಯಕುಮಾರ್ ಸ್ವಾಗತಿಸಿದರು. ಕಾರ್ಯಕ್ರಮವು ನಾಡಗೀತೆಯ ಗಾಯನದೊಂದಿಗೆ ಪ್ರಾರಂಭವಾಯಿತು.

ವರದಿ: ಕೊಡಕ್ಕಲ್ ಶಿವಪ್ರಸಾದ್, ಶಿವಮೊಗ್ಗ/ಬೆಂಗಳೂರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!