ಗುರುಮಠಕಲ್, ಮಾ.24: ಅರ್ಜಿಗಳನ್ನು ವಿನಾಕಾರಣ ತಿರಸ್ಕರಿಸಿ ವಿದ್ಯಾರ್ಥಿಗಳು ಹಾಗೂ ರೈತರಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಆರೋಪಿಸಿ ಉಪತಹಸೀಲ್ದಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಯ ಕರ್ನಾಟಕ ಸಂಘಟನೆಯ ವತಿಯಿಂದ ಗುರುಮಠಕಲ್ ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಗುರುಮಠಕಲ್ ವ್ಯಾಪ್ತಿಯಲ್ಲಿ ಬರುವ ವಿದ್ಯಾರ್ಥಿಗಳ ಹಾಗೂ ರೈತರ ವಂಶಾವಳಿ, ಜಾತಿ, ಆದಾಯ ಹಾಗೂ 371ಜೆ ಪ್ರಮಾಣಪತ್ರಗಳ ಅರ್ಜಿಗಳನ್ನು ಕಾರಣವಿಲ್ಲದೆ ಈವರೆಗೆ 50ಕ್ಕೂ ಹೆಚ್ಚು ಅರ್ಜಿಗಳನ್ನು ತಿರಸ್ಕರಿಸಿರುವುದು ಗಂಭೀರ ವಿಷಯವಾಗಿದೆ ಎಂದು ಮನವಿಯಲ್ಲಿ ಉಲ್ಲೇಖ ಮಾಡಲಾಗಿದೆ.
ತಕ್ಷಣವೇ ಸಂಬಂಧಪಟ್ಟ ಅಧಿಕಾರಿಯನ್ನು ವರ್ಗಾವಣೆ ಮಾಡಿ ಕ್ರಮ ಕೈಗೊಳ್ಳಬೇಕು, ಇಲ್ಲವಾದರೆ ಉಗ್ರ ಹೋರಾಟ ನಡೆಸುವುದಾಗಿ ಜಯ ಕರ್ನಾಟಕ ಗುರುಮಠಕಲ್ ತಾಲೂಕ ಸಂಘಟನೆ ವತಿಯಿಂದ ಮನವಿ ಸಹಿತ ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಸಂಘಟನೆಯ ನರಸಿಮುಲು ಗಂಗಾನೊಳ, ರಾಮುಲು ಕೊಡಗಂಟಿ, ರವಿಕುಮಾರ್ ವಾರದ, ಭೀಮಶಪ್ಪ ತಲಾರಿ, ಆಯಜ್ ಅಲಿ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಜಗದೀಶ್ ಕುಮಾರ್ ಭೂಮಾ




















