ಸಿರುಗುಪ್ಪ ತಾಲೂಕಿನ ಮುದೇನೂರ ಗ್ರಾಮದ ಶ್ರೀ ಬಸವೇಶ್ವರ ದೇವಸ್ಥಾನ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರಾತಿಗೊಂಡ 1,00,000/- (ಒಂದು ಲಕ್ಷ) ಮೊತ್ತದ ಡಿ ಡಿ ಯನ್ನು ಶ್ರೀ ಬಸವೇಶ್ವರ ದೇವಸ್ಥಾನದ ಸಮಿತಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಕ್ಷೇತ್ರ ಯೋಜನಾಧಿಕಾರಿ ಸುಧೀರ್ ಹಂಗಳೂರು ವಿತರಿಸಿದರು.
ನಂತರ ಮಾತನಾಡಿದ ಅವರು ಸರ್ವ ಧರ್ಮ ಶ್ರದ್ಧಾ ಕೇಂದ್ರಗಳ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದ ಕೊಡುಗೆ ಅಪಾರವಾದದ್ದು, ಭಕ್ತಿ ಮತ್ತು ಶ್ರದ್ಧೆಯ ಕೇಂದ್ರಗಳಾದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧನ ಸಹಾಯ ಮಾಡುತ್ತ ದೇವಾಲಯಗಳ ಅಭಿವೃದ್ಧಿಗೆ ಸಹಕಾರ ನೀಡುತ್ತಿರುವ ಧಾರ್ಮಿಕ ಕೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳವಾಗಿದೆ. ಧಾರ್ಮಿಕ ಕೇಂದ್ರಗಳಲ್ಲಿ ಶ್ರದ್ಧೆ ಮತ್ತು ಭಕ್ತಿ ಭಾವ, ಆಧ್ಯಾತ್ಮಿಕತೆ ಹೆಚ್ಚಿಸಲು ಹಳೆಯ ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಸಹಾಯ ಹಸ್ತ ಚಾಚುತಿದ್ದು, ರಾಜ್ಯಾದ್ಯಾಂತ ಸಾವಿರಾರು ದೇವಸ್ಥಾನಗಳು, ಮಸೀದಿಗಳು, ಚರ್ಚ್ಗಳ ಜೀರ್ಣೋದ್ಧಾರ ಮಾಡಲಾಗಿದೆ ಎಂದು ತಿಳಿಸಿದರು. ಇದಲ್ಲದೆ ಸಿರುಗುಪ್ಪ ತಾಲೂಕಿನಲ್ಲಿ 359 ದೇವಸ್ಥಾನ, ಮಸೀದಿ, ಚರ್ಚ್ಗಳ ಶ್ರದ್ಧಾ ಕೇಂದ್ರ ಸ್ವಚ್ಛತಾ ಕಾರ್ಯಕ್ರಮ ಮಾಡುವುದರ ಜೊತೆಗೆ ದೇವಸ್ಥಾನಗಳಲ್ಲಿ ಕಸ ವಿಲೇವಾರಿಗೆ ಪರಿಕರಗಳನ್ನು ವಿತರಿಸಲಾಗಿದೆ ಇದರಿಂದ ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳು ಸ್ವಚ್ಚತೆಯಿಂದ ಇರುವಂತೆ ನೋಡಿಕೊಳ್ಳಲು ಶ್ರಮಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಗಣ್ಯರಾದ C ವೀರಭದ್ರಗೌಡ, ಕೆ. ಗಂಗಪ್ಪ, ಪಿಡ್ಡಯ್ಯ ಪೂಜಾರಿ ಶ್ರೀ ಬಸವೇಶ್ವರ ದೇವಸ್ಥಾನ ಟ್ರಸ್ಟಿನ ಅಧ್ಯಕ್ಷ ಡಿ. ವೀರಭದ್ರಗೌಡ ಹಾಗೂ ಕಮಿಟಿಯ ಸರ್ವ ಸದಸ್ಯರು. ಗ್ರಾಮ ಪಂಚಾಯತ್ ಸದಸ್ಯ ಶೇಖರಪ್ಪ , ಒಕ್ಕೂಟದ ಅಧ್ಯಕ್ಷೆ ಭುವನೇಶ್ವರಮ್ಮ, ವಲಯದ ಮೇಲ್ವಿಚಾರಕ ಬೀರಪ್ಪ ಸೇವಾ ಪ್ರತಿನಿಧಿ ರವೀಂದ್ರನಾಥ್ ಹಾಗೂ ಹೇಮಾವತಿ, Csc ಸೇವಾದಾರರು ಮೌನೇಶ್ ಯಾದವ್ ಹಾಗೂ ಊರಿನ ಗಣ್ಯಮಾನ್ಯರು ಮತ್ತು ಪ್ರಗತಿ ಬಂಧು ಸ್ವ ಸಹಾಯ ಸಂಘದ ಸದಸ್ಯರು ಉಪಸ್ಥಿತರಿದ್ದರು.
ವರದಿ : ಮಸೀದಿ.ಅಬ್ದುಲ್ ಗೌಸ್. ಸಿರುಗುಪ್ಪ




















