ಬೆಂಗಳೂರು : ಕರ್ನಾಟಕ ಸರಕಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಂಗಳೂರಿನ ರವೀಂದ್ರ ಕಲಾ ಭವನದಲ್ಲಿ ಹಮ್ಮಿಕೊಂಡಿದ್ಧ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಮಾರಂಭದಲ್ಲಿ ಕೃಷಿಯಲ್ಲಿ ತೊಡಗಿಸಿಕೊಂಡು ನಾಡು ನುಡಿ ಸೇವೆ ಮಾಡುತ್ತಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಜಂತಲಿ ಶಿರೂರು ಗ್ರಾಮದ ಶ್ರೀಮತಿ ಭಾಗ್ಯ ಶ್ರೀ ಗವಿಶಿದ್ಧಯ್ಯ ಹಳ್ಳಿಕೇರಿಮಠ ಅವರಿಗೆ 2026ನೇ ಸಾಲಿನ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕರ್ನಾಟಕ ಸರಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸಚಿವರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್,
ಇಲಾಖೆಯ ಕಾರ್ಯದರ್ಶಿಗಳಾದ ಡಾ.ಶಮ್ಲಾ ಇಕ್ಬಾಲ್, ನಿರ್ದೇಶಕರಾದ ಶ್ರೀ ಮಹೇಶ್ ಬಾಬು ಸೇರಿದಂತೆ ಮುಂತಾದವರು ಪಾಲ್ಗೊಂಡಿದ್ದರು.
- ಕರುನಾಡ ಕಂದ ಪತ್ರಿಕೆ




















