ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಏ.5ರಂದು ಡಾ.ಬಾಬು ಜಗಜೀವನ್‌ರಾಮ್, ಏ.14ರಂದು ಅಂಬೇಡ್ಕರ್ ಜಯಂತಿ ಅದ್ಧೂರಿ ಆಚರಣೆಗೆ ನಿರ್ಧಾರ : ಜೂಗಲ್ ಮಂಜುನಾಯಕ

ಬಳ್ಳಾರಿ / ಕಂಪ್ಲಿ : ಏ.5ರಂದು ಡಾ.ಬಾಬು ಜಗಜೀವನ್‌ರಾಮ್ ಹಾಗೂ ಏ.14ರಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ತಹಶೀಲ್ದಾರ್ ಜೂಗಲ್ ಮಂಜುನಾಯಕ ತಿಳಿಸಿದರು.
ಅವರು ಗುರುವಾರ ಪಟ್ಟಣದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತದ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಸಹಯೋಗದಲ್ಲಿ ಆಯೋಜಿಸಿದ್ದ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಎರಡೂ ಜಯಂತಿಗಳನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಯಿತು. ಏ.14ರಂದು ಪಟ್ಟಣದ ಸಂತೆ ಮಾರುಕಟ್ಟೆಯಿಂದ ಭಾವಚಿತ್ರ ಮೆರವಣಿಗೆ ಮಾಡಲಾಗುವುದು. ಮತ್ತು ಸಂವಿಧಾನ ಮತ್ತು ಕಾನೂನು ಬಗ್ಗೆ ಸಂಪನ್ಮೂಲ ವ್ಯಕ್ತಿಗಳಿಂದ ಮಾತನಾಡಲು ಅವಕಾಶವಿದೆ. ಪ್ರತಿಯೊಬ್ಬರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ತಾ.ಪಂ ಇಒ ಆರ್.ಕೆ.ಶ್ರೀಕುಮಾರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ (ಗ್ರೇಡ್-1) ಪಿ.ರಾಜೇಶ್ವರಿ, ಎಎಸ್‌ಐ ಬಸವರಾಜ, ನಿಲಯ ಪಾಲಕ ವಿರುಪಾಕ್ಷಪ್ಪ, ಮುಖಂಡರಾದ ಜಿ.ರಾಮಣ್ಣ, ಸಣಾಪುರ ಮರಿಸ್ವಾಮಿ, ಯಲ್ಲಪ್ಪ, ಜಿ.ಪ್ರಕಾಶ, ಹಂಪಾದೇವನಹಳ್ಳಿ ಹುಲುಗಪ್ಪ, ಹೆಚ್.ಜಡೆಪ್ಪ ಎಮ್ಮಿಗನೂರು, ಶಂಭುಲಿಂಗ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!