ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತೀವ್ರಗೊಂಡ ಪ್ರಜಾಸೌಧ ಸ್ಥಳ ವಿವಾದ : ಮುಂದುವರಿದ ಗ್ರಾಮಸ್ಥರ ಧರಣಿ

“ಇದು ಕೇವಲ ಒಂದು ಗ್ರಾಮದ ಹೋರಾಟವಲ್ಲ, ಇಡೀ ತಾಲೂಕಿನ ಹಕ್ಕಿನ ಪ್ರಶ್ನೆ” :ಮಿಣಜಗಿ ಗ್ರಾಮಸ್ಥರಿಂದ ಅರೆಬೆತ್ತಲೆ ಧರಣಿ ಸತ್ಯಾಗ್ರಹ.

ತಾಳಿಕೋಟೆ: ತಾಲೂಕಿನ ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳದ ವಿರುದ್ಧ ಜನರ ಆಕ್ರೋಶ ತಾರಕಕ್ಕೇರಿದ್ದು, ಪ್ರಜಾಸೌಧವನ್ನು ತಾಳಿಕೋಟೆ ಪಟ್ಟಣದಲ್ಲಿಯೇ ನಿರ್ಮಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು 30ನೇ ದಿನವನ್ನು ದಾಟಿ ಮುಂದುವರಿದಿದೆ.
ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಈ ಹೋರಾಟ ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆಯುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಪ್ರತಿಭಟನಾಕಾರರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ 29 ದಿನಗಳಿಂದಲೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ.
ಬುಧವಾರ ನಡೆದ ಸತ್ಯಾಗ್ರಹದಲ್ಲಿ ಮಿಣಜಗಿ ಗ್ರಾಮದ ಹಿರಿಯರು ಮತ್ತು ಯುವಕರು ಭಾರೀ ಸಂಖ್ಯೆಯಲ್ಲಿ ಭಾಗವಹಿಸಿ “ಅರೆಬೆತ್ತಲೆ ಧರಣಿ” ನಡೆಸುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು. ಹೋರಾಟಕ್ಕೆ ಗ್ರಾಮ ಮಟ್ಟದಲ್ಲಿ ಸಂಪೂರ್ಣ ಬೆಂಬಲ ವ್ಯಕ್ತವಾಗಿದೆ.
ಗ್ರಾಮದ ಹಿರಿಯರಾದ ಪುನೀತಗೌಡ ಬಿರಾದಾರ ಹಾಗೂ ದ್ಯಾಮನಗೌಡ ಪಾಟೀಲ ಮಾತನಾಡಿ, “ಪ್ರಜಾಸೌಧಕ್ಕೆ ನಿಗದಿಪಡಿಸಿರುವ ಸ್ಥಳವು ಪಟ್ಟಣದಿಂದ ದೂರದ ನಿರ್ಜನ ಪ್ರದೇಶದಲ್ಲಿದ್ದು, ಮಹಿಳೆಯರು ಮತ್ತು ವಿದ್ಯಾರ್ಥಿನಿಯರ ಸುರಕ್ಷತೆಗೆ ಅಪಾಯಕಾರಿಯಾಗಿದೆ. ಜನಸಾಮಾನ್ಯರಿಗೆ ಸುಲಭವಾಗುವಂತೆ ಪಟ್ಟಣದಲ್ಲಿಯೇ ಸರ್ಕಾರಿ ಜಾಗದಲ್ಲಿ ಕಟ್ಟಡ ನಿರ್ಮಿಸಬೇಕು” ಎಂದು ಒತ್ತಾಯಿಸಿದರು.
ಇದಲ್ಲದೆ, ಈ ಕುರಿತು ಶಾಸಕರಿಗೂ ಜಿಲ್ಲಾಡಳಿತಕ್ಕೂ ಹಲವಾರು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಜನರ ಅಸಮಾಧಾನಕ್ಕೆ ಕಾರಣವಾಗಿದೆ. ನಿಗದಿಪಡಿಸಿರುವ ಜಾಗದ ಆಯ್ಕೆ ಹಿಂದೆ ಸ್ವಹಿತಾಸಕ್ತಿ ಇರುವ ಶಂಕೆಯನ್ನೂ ವ್ಯಕ್ತಪಡಿಸಿದರು.

“ಇದು ಕೇವಲ ಒಂದು ಗ್ರಾಮದ ಹೋರಾಟವಲ್ಲ, ಇಡೀ ತಾಲೂಕಿನ ಹಕ್ಕಿನ ಪ್ರಶ್ನೆ” ಎಂದು ಹೋರಾಟಗಾರರು ಎಚ್ಚರಿಕೆ ನೀಡಿದ್ದು, ಬೇಡಿಕೆ ಈಡೇರಿಸುವವರೆಗೆ ಹೋರಾಟವನ್ನು ಮುಂದುವರಿಸುವುದಾಗಿ ತಿಳಿಸಿದ್ದಾರೆ. ಈ ಹೋರಾಟಕ್ಕೆ ಮಿಣಜಗಿ ಗ್ರಾಮದ ಎಲ್ಲಾ ಸಮುದಾಯದ ಹಿರಿಯರು ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ.
ಧರಣಿಯಲ್ಲಿ ರಾಮನಗೌಡ ಪಾಟೀಲ, ಶಿವನಗೌಡ ಬಿರಾದಾರ, ಶಶಿಧರ ಬೆಣ್ಣೂರ, ಮಲ್ಲಿಕಾರ್ಜುನ ಬಾದೋಡಗಿ, ಶಿವಾನಂದ ನಾಯಕ, ಗುರುನಗೌಡ ಪಾಟೀಲ, ಬಸನಗೌಡ ಪಾಟೀಲ, ಕಾಶಿನಾಥಗೌಡ ಪಾಟೀಲ, ವೀರೇಶ ಬಮಗೊಂಡ, ಮಹೇಶ ಬಿರಾದಾರ, ದೇವೇಂದ್ರಪ್ಪ ತೆಕ್ಕೂರ್ ,ರವಿ ವನಹಳ್ಳಿ, ಹಣಮಂತ್ರಗೌಡ ಬಿರಾದಾರ, ಭಾಷಾಸಾಬ ಮನಗೂಳಿ, ಶರಣಬಸು ಪಟ್ಟಣಶೆಟ್ಟಿ, ಶಿವರೆಡ್ಡಿ ಕರವಿನ, ಗೌಡಪ್ಪ ಚೌದ್ರಿ, ಎನ್.ಡಿ. ಪಾಟೀಲ, ವಿಜಯಕುಮಾರ ಉಕ್ಕಲಿ, ಮಲ್ಲಿಕಾರ್ಜುನ ಉಕ್ಕಲಿ, ವಿನೋದ ಬಿರಾದಾರ, ಶಂಕ್ರಯ್ಯ ಹಿರೇಮಠ, ಮಹದೇವಪ್ಪ ಚಟ್ನಳ್ಳಿ, ಶಿವಪ್ಪ ಹೂಗಾರ, ಸಂಗಮೇಶ ಹುಣಸಗಿ ಸೇರಿದಂತೆ ಇನ್ನೂ ಅನೇಕರು ಭಾಗವಹಿಸಿದರು.
ಹೋರಾಟ ಸಮಿತಿಯ ಅಧ್ಯಕ್ಷ ದಶರಥಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ, ಮುತ್ತಪ್ಪ ಚಮಲಾಪುರ, ಕಾಶೀನಾಥ ಮುರಾಳ, ಮುರಿಗೆಪ್ಪ ಸರಶೆಟ್ಟಿ, ದತ್ತು ಹೆಬಸೂರ, ಪರಶುರಾಮ ತಂಗಡಗಿ, ವಿಜಯಸಿಂಗ್ ಹಜೇರಿ, ಮಹೇಶ ಛಲವಾದಿ, ಪ್ರಕಾಶ್ ಹಜೇರಿ, ಮುದಕಪ್ಪ ಬಡಿಗೇರ ಸೇರಿದಂತೆ ಹಲವರು ಹಾಜರಿದ್ದರು.

ವರದಿ ನಜೀರ್ ಚೋರಗಸ್ತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!