ಬಳ್ಳಾರಿ / ಕಂಪ್ಲಿ : ತಾಲೂಕಿನ ನೆಲ್ಲುಡಿ ಗ್ರಾಪಂಯ ಶಂಕರ್ಸಿಂಗ್ ಕ್ಯಾಂಪ್ನಲ್ಲಿರುವ ಶ್ರೀರಾಮ ದೇವಸ್ಥಾನದಲ್ಲಿ ಶ್ರೀರಾಮ ನವಮಿ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶುಕ್ರವಾರ ಶ್ರದ್ಧಾಭಕ್ತಿಯಿಂದ ನೆರವೇರಿದವು.
ಇಲ್ಲಿನ ದೇವಾಲಯದಲ್ಲಿ ಸೀತಾ ರಾಮ ಕಲ್ಯಾಣೋತ್ಸವ ಸಂಭ್ರಮದಿಂದ ನಡೆಯಿತು. ನವಮಿ ಅಂಗವಾಗಿ ಬೆಳಿಗ್ಗೆ ಶುದ್ಧಿ ಪೂಜೆಯೊಂದಿಗೆ ಆರಂಭಗೊಂಡು, ರಾಮ, ಲಕ್ಷ್ಮಣ, ಸೀತೆ, ಆಂಜನೇಯ ದೇವರಿಗೆ ವಿವಿಧ ಹೂವಿನ ಅಲಂಕಾರ ನಡೆಯಿತು. ನಂತರ ಕುಂಕುಮಾರ್ಚನೆ, ಪಂಚಾಮೃತ ಅಭಿಷೇಕದ ಬಳಿಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಪ್ರಧಾನ ಅರ್ಚಕ ಶೇಷಯ್ಯ ಅವರ ನೇತೃತ್ವದಲ್ಲಿ ಶಾಸ್ತ್ರೋಕ್ತವಾಗಿ ನಡೆದವು. ನಂತರ ವಿಶೇಷ ಮಂಗಳಾರತಿ, ಮಹಾ ಆರತಿ, ಮಹಾಪೂಜೆ, ಮಹಾಮಂಗಳಾರತಿ, ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಸಮಿತಿ ವತಿಯಿಂದ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು. ಶಂಕರ್ಸಿಂಗ್ ಕ್ಯಾಂಪ್ ಸೇರಿದಂತೆ ಸುತ್ತಲಿನ ನೂರಾರು ಭಕ್ತರು ಪೂಜಾ ಕೈಂಕರ್ಯದಲ್ಲಿ ಭಾಗವಹಿಸಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















