ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಹುಟ್ಟುಹಬ್ಬ: ಶುಭಾಷಯಗಳ ಮಹಾಪೂರ

ಬಳ್ಳಾರಿ / ಕಂಪ್ಲಿ : ‘ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಕನಸಿನಂತೆ ಗ್ರಾಮೀಣ ಜನರ ಸಬಲೀಕರಣಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಹಲವು ಬಗೆಯ ಕಾರ್ಯಕ್ರಮಗಳನ್ನು ರೂಪಿಸುತ್ತ ಬಂದಿದೆ‘ ಎಂದು ತಾಲೂಕಿನ ಯೋಜನಾಧಿಕಾರಿ ಎಲ್. ರಾಘವೇಂದ್ರ ತಿಳಿಸಿದರು.

ಡಾ. ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟು ಹಬ್ಬದ ಪ್ರಯುಕ್ತ ಕಂಪ್ಲಿ ಹಾಗೂ ಕುರುಗೋಡು ತಾಲೂಕಿನ ಪಟ್ಟಣ, ಗ್ರಾಮಗಳು ಸೇರಿದಂತೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ಪಡೆಯುತ್ತಿರುವ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಬಳಿಕ ಅವರು ಮಾತನಾಡಿದರು.

ನೂರಾರು ಅಶಕ್ತ, ಅನಾಥ, ಕಡು ಬಡತನ, ದುರ್ಬಲ ಕುಟುಂಬಗಳಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರು ಮಾಸಾಶನ ಹಾಗೂ ವಾತ್ಸಲ್ಯ ಕಿಟ್, ವಾಸ್ತಲ್ಯ ಮನೆ ನಿರ್ಮಿಸುವುದರ ಮೂಲಕ ಅಸಹಾಯಕರಿಗೆ ನೆರವಾಗುತ್ತಿದ್ದರೆ ಎಂದರು.

ಇಂದು ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ತಾಲೂಕಿನಲ್ಲಿ ನಮ್ಮ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ಪಡೆಯುತ್ತಿರುವ ಎಲ್ಲಾ ಸದಸ್ಯರಿಗೆ ಹಣ್ಣು ಹಂಪಲು ವಿತರಣೆ ಮಾಡಿದ್ದೇವೆ ಎಂದರು

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಾಶಾಸನ ಪಡೆಯುತ್ತಿರುವ ಸದಸ್ಯರು ಮಾತೃಶ್ರೀ ಡಾ.ಹೇಮಾವತಿ ವಿ ಹೆಗ್ಗಡೆ ಅವರಿಗೆ ಮನದಾಳದ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು.

ಈ ಸಂದರ್ಭದಲ್ಲಿ ತಾಲೂಕು ಕೃಷಿ ಅಧಿಕಾರಿ ಸಂಜೀವ್ ಕುಮಾರ್, ಸಂಪನ್ಮೂಲ ವ್ಯಕ್ತಿ ಬಿ. ಜಿಲಾನಸಾಬ್, ಸೇವಾ ಪ್ರತಿನಿಧಿ ಗಂಗಮ್ಮ, ಸಂಘದ ಸದ್ಯಸರು ಉಪಸ್ಥಿತರಿದ್ದರು.

ವರದಿ : ಕರುನಾಡ ಕಂದ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!