ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಹಾಗಲೂರು ಹೊಸಳ್ಳಿ ಗ್ರಾಮ ಪಂಚಾಯತಿಗೆ ಗಾಂಧಿ ಗ್ರಾಮ ಪುರಸ್ಕಾರ ಪಿಡಿಓ ಹುಸೇನ್ ಪೀರಾ

ಸಿರುಗುಪ್ಪ – ತಾಲೂಕು ಹಾಗಲೂರು ಹೊಸಳ್ಳಿ ಗ್ರಾಮ ಪಂಚಾಯತ್ ಗೆ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ನೀಡಲಾಗುವ 2024 25ನೇ ಸಾಲಿನ ಜಿಲ್ಲಾಮಟ್ಟದ ಪ್ರತಿಷ್ಠಿತ ಗಾಂಧಿ ಗ್ರಾಮ ಪುರಸ್ಕಾರ ಪ್ರಶಸ್ತಿಗೆ ಭಾಜನವಾಗಿದೆ ಎಂದು ಗ್ರಾಮ ಪಂಚಾಯತ್ ಪಿಡಿಓ ಹುಸೇನ್ ಪೀರಾ ಸಾಬ್ ಅವರು ಹೇಳಿದರು. ಹೆಚ್ ಹೊಸಳ್ಳಿ ಗ್ರಾಮದ ಸಮಗ್ರ ಅಭಿವೃದ್ಧಿ ಮತ್ತು ಆಡಳಿತಾತ್ಮಕ ಪಾರದರ್ಶಕತೆಯನ್ನು ಗುರುತಿಸಿ ಈ ಗೌರವ ನೀಡಲಾಗಿದ್ದು ಶೀಘ್ರದಲ್ಲೇ ನಡೆಯಲಿರುವ ಅಧಿಕೃತ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುತ್ತದೆ ಮೂಲಸೌಕರ್ಯ: ಕುಡಿಯುವ ನೀರಿನ ಸಮರ್ಪಕ ಪೂರೈಕೆ ಚರಂಡಿ ವ್ಯವಸ್ಥೆ ಮತ್ತು ಗ್ರಾಮದ ಸ್ವಚ್ಛತೆ ಆರ್ಥಿಕ ಶಿಸ್ತು ತೆರಿಗೆ ಸಂಗ್ರಹದಲ್ಲಿ ತೋರಿರುವ ಪ್ರಗತಿ ಮತ್ತು ಅನುದಾನಗಳ ಸಮರ್ಪಕ ಬಳಕೆ ಮನರೇಗಾ ಯೋಜನೆಯಡಿ ಗರಿಷ್ಠ ಮಾನವ ದಿನಗಳ ಸೃಜನೆ ಆಗಲೂರು ಮತ್ತು ಹೊಸಳ್ಳಿಯ ಮಾರ್ಗಗಳನ್ನು ತೋರಿಸಲು ರಸ್ತೆಯ ನಾಮಫಲಕ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ಬಸ್ ನಿಲ್ದಾಣದಲ್ಲಿ ಸಿಮೆಂಟ್ ಚೇರ್ ಗಳನ್ನು ಅಳವಡಿಸಲಾಗಿದೆ.

ಸಾಮಾಜಿಕ ಅಭಿವೃದ್ಧಿ: ಅಂಗನವಾಡಿಗಳ ಮೂಲಕ ಮಕ್ಕಳ ಬೆಳವಣಿಗೆಗೆ ಪೂರಕ ಕ್ರಮಗಳು ಗ್ರಂಥಾಲಯ ನಿರ್ವಹಣೆ ಮತ್ತು ಗ್ರಾಮ ಅಭಿವೃದ್ಧಿಯಲ್ಲಿ ಮಹಿಳೆಯರ ಸಕ್ರಿಯ ಭಾಗವಹಿಸುವಿಕೆ ಮಹಿಳಾ ಗ್ರಾಮ ಸಭೆಗಳು ಆಯೋಜನೆ ಮಾಡಿರುವುದು ಆರೋಗ್ಯ ನಿರ್ವಹಣೆಯ ಸ್ವಾಸ್ಥ್ಯ ಸಮಾಜ ನಿರ್ಮಾಣದಲ್ಲಿ ವೈದ್ಯಾಧಿಕಾರಿಗಳ ಮತ್ತು ಸಿಬ್ಬಂದಿಯ ಗಮನಾರ್ಹ ಕೊಡುಗೆ ನೀಡಿರುವುದು ಪ್ರಶಸ್ತಿ ಆಯ್ಕೆಗೆ ಪೂರಕವಾಗಿದೆ.
8 ಲಕ್ಷ ರೂ ವಿಶೇಷ ಅನುದಾನ : ಜಿಲ್ಲಾ ಮಟ್ಟದ ಈ ಪ್ರಶಸ್ತಿಗೆ ಆಯ್ಕೆಯಾದ ಪಂಚಾಯಿತಿಗೆ ಸರಕಾರದಿಂದ 8 ಲಕ್ಷ ರೂ ವಿಶೇಷ ಅನುದಾನ ಲಭಿಸಲಿದೆ ಈ ಮೊತ್ತವನ್ನು ಗ್ರಾಮದ ಹೆಚ್ಚಿನ ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಬಳಸಿಕೊಳ್ಳಲು ಅವಕಾಶವಿರುತ್ತದೆ ಎಂದರು ರಾಷ್ಟ್ರೀಯ ಸಾಕ್ಷರತಾ ಸಾಮಾಜಿಕ ಕಾರ್ಯಕರ್ತ ಅಬ್ದುಲ್ ನಬಿ ಅವರು ಮಾತನಾಡಿ ಸರಕಾರದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಜನರಿಗೆ ತಲುಪಿಸುವ ಗ್ರಾಮ ಪಂಚಾಯತ್ ಪ್ರಯತ್ನಕ್ಕೆ ಸಂದ ಗೌರವವಿದು ಈ ಪ್ರಶಸ್ತಿಯು ಮುಂದಿನ ದಿನಗಳಲ್ಲಿ ಇನ್ನಷ್ಟು ಉತ್ಸಾಹದಿಂದ ಕೆಲಸ ಮಾಡಲು ಪ್ರೇರಣೆ ನೀಡಿದ್ದಕ್ಕೆ ಪಿಡಿಓ ಹುಸೇನ್ ಪೀರಾಸಾಬ್ ಅವರ ಯಶಸ್ಸಿಗೆ ದೊರೆತಿರುವ ಮತ್ತು ಸಿಬ್ಬಂದಿಯವರಿಗೆ ಅಭಿನಂದಿಸಿ ಶುಭ ಹಾರೈಸಿದರು.

ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!