ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಶಂಕುಸ್ಥಾಪನೆ

ಬಳ್ಳಾರಿ / ಕಂಪ್ಲಿ: ಸ್ಥಳೀಯ ಜನರ ಸ್ವಇಚ್ಚೆ ಮೇರೆಗೆ ಪಟ್ಟಣದ ಸೂಕ್ತ ಸ್ಥಳದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ ನಿರ್ಮಿಸಲಾಗುವುದು. ರೈತರ ಹಿತದೃಷ್ಠಿಯಿಂದ ಮಾಗಾಣಿ ರಸ್ತೆಗಳನ್ನು ಅಭಿವೃದ್ಧಿಪಡಿಸಿದ್ದು, ಸಾಕಷ್ಟು ಅನುಕೂಲವಾಗುತ್ತಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ಸುಗ್ಗೇನಹಳ್ಳಿ ಗ್ರಾಪಂಯ ಶ್ರೀರಾಮರಂಗಾಪುರ ಗ್ರಾಮದಲ್ಲಿ 2025-26ನೇ ಸಾಲಿನ 5054 ಅಪೆಂಡಿಕ್ಸ್ ಯೋಜನೆಯ ಸುಮಾರು 5 ಕೋಟಿ ವೆಚ್ಚದಲ್ಲಿ ಶ್ರೀರಾಮರಂಗಾಪುರದಿಂದ ಮಾರುತಿಕ್ಯಾಂಪ್‌ವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ಸಲ್ಲಿಸಿದ ನಂತರ ಮಾತನಾಡಿ, ಲೋಕೋಪಯೋಗಿ ಇಲಾಖೆಯ ಅನುದಾನವನ್ನು ರೈತರ ಮಾಗಾಣಿ ರಸ್ತೆಯ ಅಭಿವೃದ್ಧಿಗೆ ಒದಗಿಸಬೇಕಾಗಿದೆ. ಗ್ಯಾರಂಟಿ ಯೋಜನೆಗಳ ನಡುವೆ ಸಾಕಷ್ಟು ಅನುದಾನಗಳೊಂದಿಗೆ ಕ್ಷೇತ್ರದಲ್ಲಿ 200 ಕಿ.ಮೀ ರಸ್ತೆ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯ ಮಾಡಲಾಗಿದೆ. ಇದರಿಂದ ಜನರು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ. ಆದರೆ, ವಿರೋಧ ಪಕ್ಷದವರು ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಎರಡು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಮೋದಿಪಲ್ಲಿ ಮಂಜುನಾಥ, ವಿ.ನಾರಾಯಣಸ್ವಾಮಿ, ಡಿ.ವೆಂಕಟಸ್ವಾಮಿ, ಚಿನ್ನಿ ಹನುಮಂತ, ಬಿ.ವೆಂಕಟೇಶ, ವೆಂಕಟರಾಮುಡು, ನಾಗಭೂಷಣ, ವೆಂಕಟಪತಿ, ನಾಗೇಶ್ವರರಾವ್, ರಂಗನಾಥರೆಡ್ಡಿ ಸೇರಿದಂತೆ ಇತರರು ಇದ್ದರು.

ಗೋನಾಳ್ : ಹಂಪಾದೇವನಹಳ್ಳಿ ಗ್ರಾಪಂಯ ಗೋನಾಳ್ ಗ್ರಾಮದಲ್ಲಿ ಸುಮಾರು 3 ಕೋಟಿ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಗಣೇಶ ಅಡಿಗಲ್ಲು ಪೂಜೆ ಸಲ್ಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ ಮೋರ್ಚ ಜಿಲ್ಲಾ ಉಪಾಧ್ಯಕ್ಷ ಹೆಚ್.ದೇವಣ್ಣ, ದುರುಗಪ್ಪ, ಚಂದ್ರಶೇಖರ, ಚನ್ನಬಸಪ್ಪ, ಜನಪ್ರತಿನಿಧಿಗಳು, ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!