ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಇಳಕಲ್ ಗೆ ಆಗಮಿಸಿದ ಜನಾರ್ಧನ್ ರೆಡ್ಡಿಗೆ ಅಭಿಮಾನಿಗಳಿಂದ ಭರ್ಜರಿ ಸ್ವಾಗತ : ಚಿಕ್ಕ ಓತಗೇರಿ ಗ್ರಾಮದ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ

ಇಳಕಲ್ : ಮಾಜಿ ಸಚಿವ ಹಾಗೂ ಗಂಗಾವತಿ ವಿಧಾನಸಭಾ ಕ್ಷೇತ್ರದ ಶಾಸಕ ಗಾಲಿ ಜನಾರ್ಧನ ರೆಡ್ಡಿ ಇಳಕಲ್ ನಗರಕ್ಕೆ ಶನಿವಾರದಂದು ಭೇಟಿ ನೀಡಿದರು.ಈ ಸಂದರ್ಭದಲ್ಲಿ ಅವರ ಅಭಿಮಾನಿಗಳು ಇಲಕಲ್ ನಗರದ ಹೊರವಲಯದಲ್ಲಿ ಆತ್ಮೀಯವಾಗಿ ಸ್ವಾಗತಿಸಿದರು.

ಇಳಕಲ್ ನಗರದಲ್ಲಿ ಅದ್ದೂರಿಯಾಗಿ ಸ್ವಾಗತಿಸಿದ ಅಭಿಮಾನಿಗಳು ನಂತರ ಚಿಕ್ಕ ಓತಗೇರಿ ಗ್ರಾಮಕ್ಕೆ ಅದ್ದೂರಿಯಾಗಿ ಸ್ವಾಗತಿಸಿದರು. ಗ್ರಾಮದಲ್ಲಿ ನೂತನವಾಗಿ ಉದ್ಘಾಟನೆಗೊಂಡ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಗಾಲಿ ಜನಾರ್ಧನ್ ರೆಡ್ಡಿ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ನೂತನವಾಗಿ ನಿರ್ಮಾಣವಾದ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ಜನಾರ್ದನ್ ರೆಡ್ಡಿ ಮನುಕುಲಕ್ಕೆ ಒಳಿತನ್ನು ಬಯಸಿದ ಮಹಾನ ದೇವತೆ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರ ದರ್ಶನ ಪಡೆದಿದ್ದು ನನ್ನ ಪುಣ್ಯ, ಸುಂದರವಾಗಿ ದೇವಸ್ಥಾನ ನಿರ್ಮಾಣವಾಗಿದೆ ಆ ತಾಯಿ ಗ್ರಾಮಸ್ಥರು ಎಲ್ಲರಿಗೂ ಒಳಿತನ್ನು ಮಾಡಲಿ ಎಂದು ಮಾತನಾಡಿದರು.

ಗ್ರಾಮಸ್ಥರ ಪರವಾಗಿ ಮಾಜಿ ಸಚಿವರಿಗೆ ಹೃದಯಪೂರ್ವಕವಾಗಿ ಸತ್ಕರಿಸಿದರು.
ಈ ಸಂದರ್ಭದಲ್ಲಿ ಮನೋಹರಗೌಡ ಗೌಡರ,
ಗ್ರಾಮದವರಾದ ಮಲ್ಲನಗೌಡ ಮರಿಗೌಡರ, ಗೋವಿಂದ ಗೌಡರ, ಶರಣಪ್ಪ ಗುಡಿಹಾಳ, ಗ್ಯಾನಪ್ಪ ಕಂದಕೂರ, ಮಹಾಂತೇಶ ಕಂದಕೂರ, ಶಿವಪ್ಪ ಮೂಲಿಮನಿ, ಬಸವರಾಜ ಕಂದಕೂರ, ಅಶೋಕ ಕಂದಕೂರ, ಅಯ್ಯನಗೌಡ ಮೂಲಿಮನಿ, ಶಶಿಧರ್ ತಾರಿವಾಳ, ವೆಂಕನಗೌಡ ಮರಿಗೌಡರ, ಈರನಗೌಡ ಗೌಡರ ಓತಗೇರಿ ಹಾಗೂ ಗ್ರಾಮದ ಗುರುಹಿರಿಯರು, ಮತ್ತು ಹಿರೇ ಓತಗೇರಿ ಗ್ರಾಮದ ಯುವ ಮಿತ್ರರು ಉಪಸ್ಥಿತರಿದ್ದರು.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!