ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಬಾಬೂಜಿ ಎಂದೇ ಹೆಸರಾಗಿದ್ದ ಬಾಬು ಜಗಜೀವನರಾಮ್‌ ನಿಸ್ವಾರ್ಥ ಸೇವೆ ಇಡೀ ದೇಶಕ್ಕೆ ಅಪಾರ ಕೊಡುಗೆ : ಕೆ.ವಿರುಪಾಕ್ಷಪ್ಪ

ಬಳ್ಳಾರಿ / ಕಂಪ್ಲಿ : ಬಾಬೂಜಿ ಎಂದೇ ಹೆಸರಾಗಿದ್ದ ಬಾಬು ಜಗಜೀವನರಾಮ್‌ ನಿಸ್ವಾರ್ಥ ಸೇವೆ, ಸ್ವಾತಂತ್ರ್ಯ ಚಳವಳಿ ಮತ್ತು ಸಮರ್ಪಣಾ ಮನೋಭಾವದ ಹೋರಾಟದಿಂದಾಗಿ ಸಮಾಜಕ್ಕೆ ಆದರ್ಶಪ್ರಾಯ ವ್ಯಕ್ತಿಯಾಗಿದ್ದಾರೆ’ ಎಂದು ಸರ್ಕಾರಿ‌ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಪಾಲಕ ಕೆ. ವಿರುಪಾಕ್ಷಪ್ಪ ಹೇಳಿದರು.
ಸ್ಥಳೀಯ ತಹಶೀಲ್ದಾರ್ ಕಛೇರಿಯ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ್ದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿ, ಮಹನೀಯರ ವೈಚಾರಿಕತೆ, ವಿಚಾರಧಾರೆಯನ್ನು ಮುಂದಿನ ಪೀಳಿಗೆಗೆ ವರ್ಗಾಯಿಸುವ ಸಲುವಾಗಿ ಜಯಂತಿ ಆಚರಣೆ ಮಾಡಬೇಕು. ರಾಜಕೀಯ ಮತ್ತು ಆರ್ಥಿಕ ಸಮಾನತೆಗೆ ಶಿಕ್ಷಣವು ಅಡಿಪಾಯ. ಪೋಷಕರು ಮಕ್ಕಳ ಶಿಕ್ಷಣಕ್ಕೆ ಹಚ್ಚು ಒತ್ತು ಕೊಡಬೇಕು’. ಬಾಬು ಜಗಜೀವನ್ ರಾಮ್ (ಬಾಬೂಜಿ) ಅವರು ಶೋಷಿತ ವರ್ಗಗಳ, ವಿಶೇಷವಾಗಿ ಬಡ ವಿದ್ಯಾರ್ಥಿಗಳ ಶಿಕ್ಷಣಕ್ಕಾಗಿ ವಸತಿ ಶಾಲೆಗಳು ಮತ್ತು ಹಾಸ್ಟೆಲ್‌ಗಳ ಸ್ಥಾಪನೆಗೆ ಅಡಿಪಾಯ ಹಾಕಿದ ಮಹಾನ್ ನಾಯಕ ಎಂದರು.
ವಸತಿ ನಿಲಯ ಪಾಲಕಿ ಎಂ.ಬಿ.ಶುಭಾ ಮಾತನಾಡಿ, ಜಗಜೀವನ್ ರಾಮ್ ಅವರು ಮೇಲು–ಕೀಳೆಂಬ ತಾರತಮ್ಯ, ಜಾತಿ ಪದ್ಧತಿ, ಅಸ್ಪೃಶ್ಯತೆಯನ್ನು ತೊಡೆದು ಹಾಕಲು ಶ್ರಮಿಸಿದರು. ಸಾಮಾಜಿಕ ಬದಲಾವಣೆಗಾಗಿ ಹೋರಾಡಿದರು. ಶೋಷಿತರ ಪರವಾಗಿ ದನಿ ಎತ್ತಿದ ಅವರ ಚಿಂತನೆಗಳನ್ನು ನಾವೆಲ್ಲರೂ ಮೈಗೂಡಿಸಿಕೊಳ್ಳಬೇಕು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಸಾಗಬೇಕು’ ಎಂದು ಹೇಳಿದರು.
ಇಲ್ಲಿ ಬಾಬು ಜಗಜೀವನ್ ರಾಮ್ ಅವರ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಅರ್ಥಪೂರ್ಣವಾಗಿ ಜಯಂತಿ ಆಚರಿಸಿದರು.
ಈ ಸಂದರ್ಭದಲ್ಲಿ ವಿವಿಧ ಇಲಾಖಾ ಅಧಿಕಾರಿಗಳಾದ ಟಿಎಂ ಬಸವರಾಜ, ಲಕ್ಷ್ಮಣ ನಾಯ್ಕ, ರಾಘವೇಂದ್ರ, ಮಾಲತೇಶ ದೇಶಪಾಂಡೆ ಸೇರಿದಂತೆ ಇತರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!