ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ತಾಳಿಕೋಟೆ: ಪ್ರಜಾಸೌಧ ಸ್ಥಳ ವಿರೋಧಿಸಿ 41ನೇ ದಿನಕ್ಕೆ ಕಾಲಿಟ್ಟ ಧರಣಿ; ತುಂಬಗಿ ಗ್ರಾಮದವರಿಂದ ಸಂಪೂರ್ಣ ಬೆಂಬಲ

​ತಾಳಿಕೋಟೆ: ತಾಲೂಕಿನ ಮೈಲೇಶ್ವರ ಗ್ರಾಮದ ಬಳಿ ನಿರ್ಮಿಸಲು ಉದ್ದೇಶಿಸಿರುವ ‘ಪ್ರಜಾಸೌಧ’ದ ಸ್ಥಳ ಆಯ್ಕೆಯನ್ನು ವಿರೋಧಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹವು ರವಿವಾರ 40ನೇ ದಿನಕ್ಕೆ ಯಶಸ್ವಿಯಾಗಿ ಮುಂದುವರೆಯಿತು.
ಈ ಹೋರಾಟಕ್ಕೆ ತಾಲೂಕಿನ ತುಂಬಗಿ ಗ್ರಾಮದವರಿಂದ ಸಂಪೂರ್ಣ ಬೆಂಬಲ ಘೋಷಿಸಿ ಧರಣಿಯಲ್ಲಿ ಭಾಗವಹಿಸಿತು.
​ಪಟ್ಟಣದ ಬಸವೇಶ್ವರ ವೃತ್ತದ ಬಳಿ ನಡೆಯುತ್ತಿರುವ ಸತ್ಯಾಗ್ರಹದಲ್ಲಿ ಪಾಲ್ಗೊಂಡ ​ಮುಖಂಡರು ನಿರ್ಜನ ಪ್ರದೇಶದಲ್ಲಿ ಸೌಧ ಬೇಡ ಎಂದು ಆಕ್ರೋಶ ವ್ಯಕ್ತಪಡಿಸಿದರು.
​ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕು ಹೋರಾಟ ಸಮಿತಿಯ ಸಹ ಕಾರ್ಯದರ್ಶಿ ಮಹೇಶ ಛಲವಾದಿ “ಪ್ರಜಾಸೌಧವು ಸಾರ್ವಜನಿಕರಿಗೆ ಸುಲಭವಾಗಿ ತಲುಪುವಂತಿರಬೇಕು. ಆದರೆ ಈಗ ಗುರುತಿಸಲಾದ ಸ್ಥಳವು ಪಟ್ಟಣದಿಂದ ದೂರವಿದ್ದು, ನಿರ್ಜನ ಪ್ರದೇಶದಲ್ಲಿದೆ. ಇಲ್ಲಿ ಸೌಧ ನಿರ್ಮಿಸಿದರೆ ವೃದ್ಧರು, ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಅಂಗವಿಕಲರಿಗೆ ಸುರಕ್ಷತೆಯ ದೃಷ್ಟಿಯಿಂದ ಹಾಗೂ ಓಡಾಟಕ್ಕೆ ತೀವ್ರ ತೊಂದರೆಯಾಗಲಿದೆ. ಸರ್ಕಾರ ಕೂಡಲೇ ಹಠಮಾರಿತನ ಬಿಟ್ಟು ಪಟ್ಟಣದ ವ್ಯಾಪ್ತಿಯಲ್ಲಿರುವ ಸರ್ಕಾರಿ ಜಾಗದಲ್ಲಿಯೇ ಕಟ್ಟಡ ನಿರ್ಮಿಸಬೇಕು” ಎಂದು ಒತ್ತಾಯಿಸಿದರು.
​ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಕಿಡಿ
​ಜಿಲ್ಲಾ ಉಸ್ತುವಾರಿ ಸಚಿವರ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, “ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಬಬಲೇಶ್ವರ ಅಥವಾ ತಿಕೋಟಾಕ್ಕೆ ಸೀಮಿತರಲ್ಲ, ಅವರು ಇಡೀ ಜಿಲ್ಲೆಗೆ ಜವಾಬ್ದಾರರು. 40 ದಿನಗಳಿಂದ ಜನ ರಸ್ತೆಯಲ್ಲಿ ಕುಳಿತು ಪ್ರತಿಭಟಿಸುತ್ತಿದ್ದರೂ ಸಚಿವರು ಕಣ್ಣು ಮುಚ್ಚಿ ಕುಳಿತಿರುವುದು ವಿಷಾದನೀಯ. ಇಲ್ಲಿ ಜಾಗ ದಾನ ನೀಡಿದವರ ಹಿಂದೆ ಸ್ವಹಿತಾಸಕ್ತಿಯಿದ್ದು, ತಮ್ಮ ಜಮೀನುಗಳನ್ನು ವಾಣಿಜ್ಯೀಕರಣಗೊಳಿಸುವ ಉದ್ದೇಶದಿಂದ ಈ ಸಂಚು ರೂಪಿಸಲಾಗಿದೆ” ಎಂದು ಗಂಭೀರ ಆರೋಪ ಮಾಡಿದರು.
ಈ ಸಂದರ್ಭದಲ್ಲಿ ತುಂಬಗಿ ಗ್ರಾಮದ ಹಿರಿಯರಾದ ಎ. ಬಿ. ಬಿರಾದಾರ ​ಬಿ. ಎಂ. ಕೊಳ್ಳಿ, ​ಬಸನಗೌಡ ಬಿರಾದಾರ, ​ಹನುಮಂತ ಮಂಗ್ಯಾಳ, ​ಬಸನಗೌಡ ಮಂಗ್ಯಾಳ, ​ವೀರಗಂಟೆಪ್ಪ ಬಿ. ಚೌದರಿ, ​ಮಲ್ಲಣ್ಣ ತುಂಬಗಿ, ಹನುಮಂತರಾಯ ಬಿರಾದಾರ, ​ಬಸನಗೌಡ ಬಿರಾದಾರ, ಅನೇಕರು ಹಾಜರಿದ್ದರು.
ಹೋರಾಟ ಸಮಿತಿಯ ಅಧ್ಯಕ್ಷ ದಶರತಸಿಂಗ್ ಮನಗೂಳಿ, ಎಸ್.ಬಿ. ಕಟ್ಟಿಮನಿ, ಆರ್ ಎಸ್ ಪಾಟೀಲ (ಕುಚಬಾಳ) ಮುತ್ತಪ್ಪ ಚಮಲಾಪುರ, , ಕಾಶೀನಾಥ ಮುರಾಳ, ಮುರಿಗೆಪ್ಪ ಸರಶೆಟ್ಟಿ, ದತ್ತು ಹೆಬಸೂರ, ಪರಶುರಾಮ ತಂಗಡಗಿ, ನಾಗೇಶ ಕಟ್ಟಿಮನಿ, ದೇವೇಂದ್ರ ಹಾದಿಮನಿ, ವಿಜಯಸಿಂಗ್ ಹಜೇರಿ, ಮಹೇಶ ಛಲವಾದಿ, ಪ್ರಕಾಶ್ ಹಜೇರಿ ಮುದಕಪ್ಪ ಬಡಿಗೇರ, ಸಿರಸಕುಮಾರ ಹಜೇರಿ, ಮಲ್ಲು ಮೇಟಿ, ಸದ್ದಾಂ ಹುಸೇನ್ ಬೀಳಗಿ, ಸೇರಿದಂತೆ ಅನೇಕರು ಮತ್ತು ಪಟ್ಟಣದ ಗಣ್ಯರು ಭಾಗವಹಿಸಿದ್ದರು.

ವರದಿ ನಜೀರ್ ಅಹ್ಮದ್ ಚೋರಗಸ್ತಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!