ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಅಭಿವೃದ್ಧಿ ಕಾರ್ಯಗಳೊಂದಿಗೆ ಜನತೆಗೆ ಮೂಲಭೂತ ಸೌಲಭ್ಯ ಕಲ್ಪಿಸಲಾಗುತ್ತದೆ : ಶಾಸಕ ಜೆ.ಎನ್.ಗಣೇಶ

ಬಳ್ಳಾರಿ / ಕಂಪ್ಲಿ: ತಾಲೂಕಿನ ಗ್ರಾಮೀಣ ಭಾಗದಲ್ಲಿ ಸುಮಾರು 6.20 ಕೋಟಿ ವೆಚ್ಚದಲ್ಲಿ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಜೆ.ಎನ್.ಗಣೇಶ ಮಂಗಳವಾರ ಭೂಮಿ ಪೂಜೆ ಸಲ್ಲಿಸಿದರು.
ನಂತರ ಶಾಸಕ ಗಣೇಶ ಮಾತನಾಡಿ, ಸಾಕಷ್ಟು ಅಭಿವೃದ್ಧಿ ಕಾರ್ಯಗಳೊಂದಿಗೆ ಜನತೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಇಂದಿನ ದಿನಮಾನದಲ್ಲಿ ಶಿಕ್ಷಣಕ್ಕೆ ಅತಿ ಹೆಚ್ಚು ಒತ್ತು ನೀಡಿದರೆ, ಮಕ್ಕಳ ಭವಿಷ್ಯ ಉಜ್ವಲವಾಗಲಿದೆ ಎಂದು ಅಭಿಮತ ವ್ಯಕ್ತಪಡಿಸಿದರು.
ತಾಲೂಕಿನ ದೇವಲಾಪುರ ಗ್ರಾಮದ ಸೋಮಲಾಪುರ ಗ್ರಾಮದಲ್ಲಿ 2025-26ನೇ ಸಾಲಿನ 4059 ಸಿಎಂಡಿಕ್ಯೂ ಯೋಜನೆಯಡಿ ಸುಮಾರು 300 ಲಕ್ಷ ಹಾಗೂ ಸುಗ್ಗೇನಹಳ್ಳಿ ಗ್ರಾಪಂಯ ಮಾವಿನಹಳ್ಳಿ ಗ್ರಾಮದಲ್ಲಿ ಸುಮಾರು 320 ಲಕ್ಷ ವೆಚ್ಚದಲ್ಲಿ ನಿರ್ಮಿಸಲಿರುವ ಸಿಸಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಯ ತಾಲೂಕು ಸಮಿತಿ ಅಧ್ಯಕ್ಷ ಕೆ.ಶ್ರೀನಿವಾಸರಾವ್, ಮುಖಂಡರಾದ ವಿ.ಮಾರೇಶ, ಚಂದುಸಾಬ್, ಆರ್.ಬಸವರಾಜ, ರಾಮರಾಜು, ವಡ್ಡಿನ ಮರಿಸ್ವಾಮಿ, ನಾಯಕರ ಪಂಪಣ್ಣ, ಬಾಬುಸಾಬ್, ಬಸಯ್ಯಸ್ವಾಮಿ, ಪಂಪಣ್ಣ, ಎನ್.ರಮೇಶ, ಹಾಗೂ ಸೋಮಲಾಪುರದ ವಿ.ರಮೇಶ, ವಿರುಪಣ್ಣ, ಉಮೇಶಪ್ಪ, ತಿಮ್ಮಲಾಪುರ ಬಸವರಾಜ, ಎಂ.ಗೋಪಾಲಪ್ಪ, ರಾಮಪ್ಪ, ಎಂ.ಮಂಜಪ್ಪ, ಬಿ.ಕೆ.ಸ್ವಾಮಿ, ಬಿ.ಬಸಪ್ಪ ಸೇರಿದಂತೆ ಅನೇಕರಿದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!