ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳಿಗೆ ಸ್ವಲ್ಪ ನಿರಾಶೆ. ನಿನ್ನೆ ಪ್ರಕಟವಾಗಬೇಕಿದ್ದ ಫಲಿತಾಂಶವನ್ನು ಶಿಕ್ಷಣ ಇಲಾಖೆ ಮುಂದೂಡಿದೆ.
ಫೆಬ್ರವರಿ 28ರಿಂದ ಮಾರ್ಚ್ 17ರವರೆಗೆ ರಾಜ್ಯದಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆಗಳು ಯಶಸ್ವಿಯಾಗಿ ನಡೆದಿದ್ದವು. ಒಟ್ಟು 1,217 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.
ಈ ಬಾರಿ ಸುಮಾರು 7 ಲಕ್ಷಕ್ಕಿಂತ ಹೆಚ್ಚು, ಅಂದರೆ 7,10,363 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದರು. ಇದೀಗ ಎಲ್ಲರ ಕಣ್ಣು ಫಲಿತಾಂಶದ ಮೇಲೆಯೇ ನೆಟ್ಟಿದೆ.
ಶಿಕ್ಷಣ ಇಲಾಖೆಯ ಮಾಹಿತಿಯ ಪ್ರಕಾರ, ಏಪ್ರಿಲ್ 9ರಂದು ಫಲಿತಾಂಶ ಪ್ರಕಟವಾಗುವ ಸಾಧ್ಯತೆ ಇದೆ.
ವಿದ್ಯಾರ್ಥಿಗಳು ಫಲಿತಾಂಶ ತಿಳಿಯಲು ಎಲ್ಲಿಗೂ ಹೋಗಬೇಕಾಗಿಲ್ಲ. ಮನೆಯಲ್ಲೇ ಕುಳಿತು ಆನ್‌ಲೈನ್ ಮೂಲಕ ತಮ್ಮ ಅಂಕಪಟ್ಟಿಯನ್ನು ಸುಲಭವಾಗಿ ವೀಕ್ಷಿಸಬಹುದು.
ಅಧಿಕೃತ ವೆಬ್ಸೈಟ್ karresults.nic.in ಭೇಟಿ ನೀಡಿ
ವರದಿ ವಿಠ್ಠಲ ಖೋಕಾಟೆ




















