ವೆಬ್ಸೈಟ್ ಲೋಕಾರ್ಪಣೆ ಮಾಡಿದ ಆಲೂರು ಹಿರೇಮಠದ ಶ್ರೀಗಳು
ಕಲ್ಬುರ್ಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ ಆಲೂರು ಆಲೂರು ಗ್ರಾಮದಲ್ಲಿ ” ಆಧ್ಯಾತ್ಮಿಕ ಕಾರ್ಯಕ್ರಮ ನಡೆಯಿತು ಈ ಕಾರ್ಯಕ್ರಮದಲ್ಲಿ ಮಾನವ ಸತ್ತ ನಂತರವೂ ಮತ್ತೊಬ್ಬರ ಬದುಕಿಗೆ ಬೆಳಕಾಗುವ ದೇಹಾಂಗದಾನವು ಅತ್ಯಂತ ಪವಿತ್ರವಾದ ಕಾಯಕವಾಗಿದೆ. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುತ್ತಿರುವ ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿಯ ಕಾರ್ಯ ಶ್ಲಾಘನೀಯ,” ಎಂದು ಆಲೂರು ಸಂಸ್ಥಾನ ಹಿರೇಮಠದ ಶ್ರೀ ಕೆಂಚ ವೃಷಭೇ0ದ್ರ ಶಿವಾಚಾರ್ಯ ಮಹಾ ಸ್ವಾಮೀಜಿಯವರು ಅಭಿಪ್ರಾಯಪಟ್ಟರು.
ಆಲೂರ್ ಸಂಸ್ಥಾನ ಹಿರೇಮಠದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿಯ ಅಧಿಕೃತ ವೆಬ್ಸೈಟ್ ಅನ್ನು ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಆಧುನಿಕ ತಂತ್ರಜ್ಞಾನದ ಮೂಲಕ ಜಾಗೃತಿ ಮೂಡಿಸಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.
ವೆಬ್ಸೈಟ್ ಲೋಕಾರ್ಪಣೆ: ಸಮಿತಿಯ ಕಾರ್ಯ ಚಟುವಟಿಕೆಗಳು ಮತ್ತು ದೇಹಾಂಗದಾನದ ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲು ಈ ವೆಬ್ಸೈಟ್ ವಿನ್ಯಾಸಗೊಳಿಸಲಾಗಿದೆ.
ಶ್ರೀಗಳ ಆಶೀರ್ವಚನ: ಮಾನವ ಜನ್ಮ ಸಾರ್ಥಕವಾಗಬೇಕಾದರೆ ಸಮಾಜಕ್ಕೆ ಉಪಯುಕ್ತವಾಗುವ ಕೆಲಸ ಮಾಡಬೇಕು. ನೇತ್ರದಾನ, ಅಂಗಾಂಗದಾನದಂತಹ ಕಾರ್ಯಗಳಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ದೇಶಾದ್ಯಂತ ದೇಹಾಂಗದಾನದ ಮಹತ್ವವನ್ನು ಸಾರುವ ಮತ್ತು ದಾನಿಗಳ ನೋಂದಣಿಗೆ ವೇದಿಕೆ ಕಲ್ಪಿಸಿಕೊಡುವ ಉದ್ದೇಶವನ್ನು ಸಮಿತಿ ಹೊಂದಿದೆ.
ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿ ಅಧ್ಯಕ್ಷ ಶಿವಾನಂದ ಹೂಗಾರ ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ದೇಹಾಂಗದಾನ ಜಾಗೃತಿ ಸಮಿತಿಯ ಪದಾಧಿಕಾರಿಗಳು, ಗಣ್ಯರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
- ಕರುನಾಡ ಕಂದ ಪತ್ರಿಕೆ




















