ಬೀದರ್ ಜಿಲ್ಲೆ ಬಸವಕಲ್ಯಾಣ ತಾಲೂಕಿನ ಗ್ರಾಮೀಣ ಪ್ರದೇಶಗಳಾದ ಕಿಟ್ಟಾ, ಹಾರಕೂಡ, ಗೋಕುಳ, ಪ್ರತಾಪೂರ, ಮುಡಬಿ, ಹಾಗೂ ಇತರೆ ಎಲ್ಲಾ ಗ್ರಾಮಗಳಲ್ಲಿ ಕಿರಾಣಾ ಅಂಗಡಿಗಳಲ್ಲಿ, ಪಾನ್ ಶಾಪ್ ಡಬ್ಬಾಗಳಲ್ಲಿ ಹಾಗೂ ಸಾರ್ವಜನಿಕ ಜಾಗಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದಾರೆ, ಇದರಿಂದ ಬಡ ಜನರ ಜೀವನ ನರಕವಾಗುತ್ತಿದೆ ವಿಶೇಷವಾಗಿ, ಕಾಲೇಜು ವಿದ್ಯಾಥಿಗಳು, ದಿನಗೂಲಿ ಕಾರ್ಮಿಕರು ಮತ್ತು ಬಡ ಕುಟುಂಬಗಳು ಈ ಅನಾಹುತದಿಂದ ಹೆಚ್ಚು ಬಾಧಿತರಾಗುತ್ತಿದ್ದಾರೆ.
ಅಕ್ರಮ ಮದ್ಯದ ಲಭ್ಯತೆಯಿಂದ ಯುವಕರು ದುಷ್ಕೃತ್ಯಗಳ ಕಡೆಗೆ ಆಕರ್ಷಿತರಾಗಿ, ತಮ್ಮ ಶಿಕ್ಷಣ ಮತ್ತು ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ಕುಟುಂಬಗಳಲ್ಲಿ ಕಲಹಗಳು, ಆರ್ಥಿಕ ಸಂಕಷ್ಟಗಳು ಹೆಚ್ಚುತಿದ್ದು, ಮಹಿಳೆಯರು ಮತ್ತು ಮಕ್ಕಳ ಮೇಲೆ ದುಷ್ಪರಿಣಾಮ ಬೀರುತ್ತಿದೆ.
ಆದ್ದರಿಂದ, ಈ ಗಂಭೀರ ಸಮಸ್ಯೆಯನ್ನು ಗಮನಿಸಿ, ಬಸವಕಲ್ಯಾಣ ತಾಲೂಕಿನ ಗ್ರಾಮೀಣ ಭಾಗದಲ್ಲಿ ತಕ್ಷಣ ಪರಿಶೀಲನೆ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಲು ಕಠಿಣ ಕ್ರಮಗಳನ್ನು ಕೈಗೊಳ್ಳಬೇಕಾಗಿ ವಿನಂತಿಸಿಕೊಳ್ಳುತ್ತೇವೆ ಒಂದು ವೇಳೆ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವುದನ್ನು ನಿಲ್ಲಿಸದೇ ಇದ್ದಲ್ಲಿ ತಮ್ಮ ವಿರುದ್ಧ ಹೋರಾಟ ಮಾಡಲಾಗುವುದು ಎಂದು ಬಸವಕಲ್ಯಾಣ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಪತ್ರದ ಮೂಲಕ ಎಚ್ಚರಿಕೆ ಸಂದೇಶ ನೀಡಿದ್ದಾರೆ.
ಈ ಸಂದರ್ಭದಲ್ಲಿ ಬಿ. ಎಸ್. ಪಿ. ತಾಲೂಕು ಅಧ್ಯಕ್ಷರಾದ ಶಂಕರ ಫುಲೆ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.
ವರದಿ : ಶ್ರೀನಿವಾಸ ಬಿರಾದಾರ




















