ಸಿರುಗುಪ್ಪ – ರಾಜ್ಯದ ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು ಸರಕಾರ ಈಗ 2026-27 ನೇ ಶೈಕ್ಷಣಿಕ ವರ್ಷದಿಂದ ದ್ವಿಭಾಷಾ ತರಗತಿಗಳನ್ನು ಪೂರ್ಣ ಪ್ರಮಾಣದಲ್ಲಿ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಗುರಪ್ಪ ಹೇಳಿದರು. ನಗರದ ಟಿಎಲ್‌ಸಿ ಕೇಂದ್ರದ ಸಭಾಂಗಣದಲ್ಲಿ ತಾಲೂಕಿನ 80 ಶಾಲೆಗಳ ಶಿಕ್ಷಕರಿಗೆ ಒಂದು ವಾರದ ದ್ವಿಭಾಷಾ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಸರಕಾರಿ ಶಾಲೆಗಳಲ್ಲಿ ಸ್ಥಳೀಯ ಭಾಷೆಯ ಜೊತೆಗೆ ಇಂಗ್ಲಿಷ್ ಕಲಿಕೆಗೆ ಪ್ರೋತ್ಸಾಹ ನೀಡಲು ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿರುವ ಶಿಕ್ಷಕರಿಗೆ ಇಂಗ್ಲಿಷ್ ಭಾಷೆಯ ಬೋಧನೆ ಬಗ್ಗೆ ತರಬೇತಿ ನೀಡಲು ತೀರ್ಮಾನಿಸಲಾಗಿದೆ ಎಂದರು. ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆಯಿಂದ ಶಿಕ್ಷಕರಿಗೆ ತರಬೇತಿ ನೀಡಲಿದ್ದು ಹೊಸ ಶೈಕ್ಷಣಿಕ ವರ್ಷ ಆರಂಭವಾಗುವುದರೊಳಗೆ ಶಿಕ್ಷಕರನ್ನು ಸಜ್ಜುಗೊಳಿಸಲು ತಯಾರಿ ನಡೆಸಲಾಗುತ್ತಿದೆ ಸರಕಾರಿ ಶಾಲೆಗಳಲ್ಲಿ 1 ರಿಂದ 5ನೇ ತರಗತಿಯವರೆಗಿನ ವಿದ್ಯಾರ್ಥಿಗಳಿಗೆ ಮಾತೃಭಾಷೆ ಸ್ಥಳೀಯ ಭಾಷೆ ಜೊತೆಗೆ ಇಂಗ್ಲೀಷ್ ಭಾಷಾ ಕೌಶಲ್ಯ ಕಲಿಸುವ ಉದ್ದೇಶಿಸಲಾಗಿದೆ ಈಗಾಗಲೇ ಕೆಲ ಜಿಲ್ಲೆಗಳಲ್ಲಿ ದ್ವಿಭಾಷಾ ತರಗತಿಗಳನ್ನು ನಡೆಸಲಾಗುತ್ತಿದ್ದು ಮುಂದಿನ ಶೈಕ್ಷಣಿಕ ವರ್ಷದಿಂದ ನಮ್ಮ ತಾಲೂಕಿನ ಶಾಲೆಗಳಲ್ಲಿ ವಿಸ್ತರಣೆಗೆ ಸಿದ್ಧತೆ ನಡೆದಿದೆ ಎಂದು ತಿಳಿಸಿದರು ಬಳ್ಳಾರಿ ಡಯಟ್ ಜಿಲ್ಲಾ ನೋಡಲ್ ಅಧಿಕಾರಿ ಎಚ್.ಕೆ.ಪಾಂಡು ಮಾತನಾಡಿ ಸರಕಾರದ ಸೂಚನೆಯಂತೆ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ದ್ವಿ ಭಾಷಾ ಬೋಧನೆ ಬಗ್ಗೆ ತರಬೇತಿಯನ್ನು ನೀಡಲಾಗುತ್ತಿದೆ ಸಂಪನ್ಮೂಲ ವ್ಯಕ್ತಿಗಳ ನೆರವಿನಿಂದ ಶಿಕ್ಷಕರಿಗೆ ದ್ವಿಭಾಷಾ ಬೋಧನೆಯ ಬಗ್ಗೆ ತರಬೇತಿಯನ್ನು ಒದಗಿಸಲಾಗುತ್ತದೆ ಎಂದು ಹೇಳಿದರು. ಕ್ಷೇತ್ರ ಸಮನ್ವಯ ಅಧಿಕಾರಿ ತಮ್ಮನಗೌಡ ಪಾಟೀಲ್ ಜಿಲ್ಲಾ ಸಾಕ್ಷರತಾ ಕಾರ್ಯಕಾರಿ ಸದಸ್ಯರು ಅಬ್ದುಲ್ ನಬೀ ಬಿಆರ್‌ಪಿಗಳಾದ ಗಜೇಂದ್ರ ರುದ್ರವೇಣಿ ಹಾಗೂ ದ್ವಿಭಾಷಾ ತರಬೇತಿಯ ಸಂಪನ್ಮೂಲ ವ್ಯಕ್ತಿಗಳು ಮತ್ತು ವಿವಿಧ ಶಾಲೆಗಳ ಶಿಕ್ಷಕರು ಇದ್ದರು.
ವರದಿ : ಮಸೀದಿ ಅಬ್ದುಲ್ ಗೌಸ್, ಸಿರುಗುಪ್ಪ




















