ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ವಿಶ್ವ ಮಹಿಳಾ ದಿನಾಚರಣೆ : ಮಹಿಳಾ ಸಾಧಕಿಯರಿಗೆ ಸನ್ಮಾನ

ಬಳ್ಳಾರಿ / ಕಂಪ್ಲಿ : ಮಹಿಳೆಯು ಸಮಾಜದ ಸ್ವಾಭಿಮಾನದ ಸಂಕೇತವಾಗಿದ್ದು, ಪ್ರತಿ ಕ್ಷೇತ್ರದಲ್ಲಿ ಮಹಿಳೆಯು ಗುರುತಿಸಿಕೊಂಡು ಸಮಾಜದ ಪ್ರಗತಿಯ ಪ್ರಮುಖ ಭಾಗವಾಗಿದ್ದಾಳೆ’ ಎಂದು ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಹೆಚ್. ದೊಡ್ಡಬಸಪ್ಪ ಹೇಳಿದರು.
ಪಟ್ಟಣದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತಾಲೂಕು ಘಟಕದಿಂದ ಆಚರಿಸಿದ ವಿಶ್ವ ಮಹಿಳಾ ದಿನಾಚರಣೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಮಾಜದ ಶ್ರೇಯೋಭಿವೃದ್ಧಿಗೆ ಮಹಿಳೆಯರ ಪಾತ್ರ ಅಪಾರ. ಕಿತ್ತೂರು ರಾಣಿ ಚೆನ್ನಮ್ಮ, ಒನಕೆ ಓಬವ್ವ, ಕಲ್ಪನಾ ಚಾವ್ಲಾ, ಅಕ್ಕ ಮಹಾದೇವಿ ಸೇರಿದಂತೆ ಹಲವು ಮಹಿಳೆಯರು ಸಮಾಜಕ್ಕೆ ಹಲವು ಕೊಡುಗೆ ನೀಡಿದ್ದಾರೆ. ಅವರಂತೆಯೇ ಮಹಿಳಾ ದೊಡ್ಡ ಮಟ್ಟದಲ್ಲಿ ಬೆಳೆಯಬೇಕು ಎಂದರು.
ಸಾವಿತ್ರಿ ಬಾಯಿ ಪುಲೆ ತಾಲೂಕು ಅಧ್ಯಕ್ಷೆ ಸುನಿತಾ ಪೂಜಾರಿ ಉದ್ಘಾಟಿಸಿ ಮಾತನಾಡಿ, ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮಹಿಳೆಯರ ಪಾತ್ರ ಮಹತ್ತರವಾಗಿದೆ. ಜತೆಗೆ ಸಮಾಜದಲ್ಲಿ ಮಹಿಳೆಯರ ಜವಾಬ್ದಾರಿ ಹೆಚ್ಚಿನದ್ದಾಗಿದೆ. ಮಹಿಳೆಯರಿಗೆ ಹೆಚ್ಚಿನ ಅವಕಾಶಗಳು ದೊರೆಯಬೇಕು ಎಂದರು.
ಮಹಿಳಾ ಶಿಕ್ಷಕಿ ನಾಗವೇಣಿ ಇವರು ಮಹಿಳೆಯರ ಆತ್ಮಸ್ಥೈರ್ಯ ಕುರಿತು ಉಪನ್ಯಾಸ ನೀಡಿದರು. ದಿನಾಚರಣೆ ಪ್ರಯುಕ್ತ ಮಹಿಳಾ ನೌಕರರಿಗೆ ರಂಗೋಲಿ, ಮ್ಯೂಸಿಕಲ್ ಚೇರ್, ಗ್ಲಾಸ್ ಮತ್ತು ಬಲೂನ್ ಆಟ, ಭಾಗಗೀತೆ ಸೇರಿದಂತೆ ವಿವಿಧ ಸ್ಪರ್ಧೆಗಳು ಜರುಗಿದ್ದು, ವಿಜೇತರಿಗೆ ಬಹುಮಾನದೊಂದಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ, ಸರ್ಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಕೆ.ವಿರುಪಾಕ್ಷಪ್ಪ, ಗೌರವಾಧ್ಯಕ್ಷ ಶಿವಪ್ಪ, ಖಜಾಂಚಿ ನಾಸೀರ್ ಹುಸೇನ್, ಉಪಾಧ್ಯಕ್ಷರಾದ ಹುಲುಗಪ್ಪ, ಚನ್ನಬಸಪ್ಪ, ಲತೀಫಾ ಬೇಗಂ, ಕಾರ್ಯದರ್ಶಿ ವಾಮದೇವ, ಸಂಘಟನಾ ಕಾರ್ಯದರ್ಶಿ ಬೀರಲಿಂಗಪ್ಪ, ಸಾಂಸ್ಕೃತಿಕ ಕಾರ್ಯದರ್ಶಿ ಸುನಿತಾ, ಸಹ ಕಾರ್ಯದರ್ಶಿ ಅನುದೀಪ್, ಜಿಪಿಟಿ ಕಾರ್ಯದರ್ಶಿ ನಿಂಗರಾಜ, ಶಿಕ್ಷಕರ ಸಂಘದ ಉಪಾಧ್ಯಕ್ಷ ಚಂದ್ರಶೇಖರ ಸೇರಿದಂತೆ ಪದಾಧಿಕಾರಿಗಳು, ವಿವಿಧ ಇಲಾಖೆಯ ನೌಕರರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!