ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಚಿಟಗುಪ್ಪಾ ನೂತನ ವಿಧಾನಸಭಾ ಕ್ಷೇತ್ರವಾಗಿ ರಚನೆಯಾಗಲಿ : ಸಂಗಮೇಶ ಎನ್. ಜವಾದಿ

ಚಿಟಗುಪ್ಪಾ : ಬೀದರ್ ಜಿಲ್ಲೆಯ ಹುಮನಾಬಾದ್ ವಿಧಾನಸಭಾ ಮತಕ್ಷೇತ್ರದ ತಾಲೂಕು ಕೇಂದ್ರವಾದ ಚಿಟಗುಪ್ಪಾ ನೂತನ ವಿಧಾನಸಭಾ ಮತಕ್ಷೇತ್ರವಾಗಿ ರಚನೆಯಾಗಬೇಕೆಂದು ಸಾಹಿತಿ , ಪರಿಸರ ಸಂರಕ್ಷಕರು, ಹೋರಾಟಗಾರರಾದ ಸಂಗಮೇಶ ಎನ್. ಜವಾದಿ ಒತ್ತಾಯಿಸಿದ್ದಾರೆ.
ಪಟ್ಟಣದಲ್ಲಿ ಗುರುವಾರದಂದು ಪತ್ರಿಕಾ ಪ್ರಕಟಣೆಯ ಮೂಲಕ ಈ ವಿಷಯ ತಿಳಿಸಿದ ಸಂಗಮೇಶ ಎನ್ ಜವಾದಿ ರವರು, ಚಿಟಗುಪ್ಪಾ ಪಟ್ಟಣವು ಕಳೆದ 50 ವರ್ಷಗಳಿಂದ ಪ್ರಮುಖ ವ್ಯಾಪಾರ ಕೇಂದ್ರವಾಗಿದೆ. 60 -70 ಗ್ರಾಮಗಳಿಗೆ ಅನುಕೂಲಕರ ವಾತಾವರಣ ಇಲ್ಲಿದೆ. ಈಗಾಗಲೇ ತಹಶೀಲ್ದಾರ್ ಕಚೇರಿ, ತಾಲೂಕು ಪಂಚಾಯತ್ ಕಛೇರಿ, ಅರಣ್ಯ ಇಲಾಖೆ ಕಛೇರಿಗಳು ಸೇರಿದಂತೆ ಅನೇಕ ತಾಲೂಕು ಕಛೇರಿಗಳು
ಕಾರ್ಯ ನಿರ್ವಹಿಸುತ್ತಿವೆ. ರೈತರಿಗೆ ಸಕಾಲದಲ್ಲಿ ಸಹಾಯ ಮಾಡಲು ಕೃಷಿ ಇಲಾಖೆ ಇದೆ. ಸಮುದಾಯ ಆರೋಗ್ಯ ಕೇಂದ್ರವಿದ್ದು, ಜನಸಾಮಾನ್ಯರಿಗೆ ಚಿಕಿತ್ಸೆ ನೀಡುತ್ತಿದೆ. ಇನ್ನು ಹೆಚ್ಚಿನ ಸೌಲಭ್ಯಗಳನ್ನು ಪಡೆಯಲು ಈ ಸಮುದಾಯದ ಆರೋಗ್ಯ ಕೇಂದ್ರವನ್ನು
ಆದಷ್ಟು ಬೇಗನೆ ಮೇಲ್ದರ್ಜೆಗೇರಿ
ತಾಲೂಕು ಸಾರ್ವಜನಿಕ ಆಸ್ಪತ್ರೆ ಮಾಡಬೇಕಾಗಿರುವುದು ಅನಿವಾರ್ಯತೆ ಮತ್ತು ಅಷ್ಟೇ ಅಗತ್ಯ ಕೂಡ ಇದೆ, ಈ ಬಗ್ಗೆ ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು.

ಇನ್ನು ಚಿಟಗುಪ್ಪಾ ಪಟ್ಟಣದಲ್ಲಿ ಈಗಾಗಲೇ ಭಾರತೀಯ ರಿಸರ್ವ್ ಬ್ಯಾಂಕ್ ಸೇರಿದಂತೆ ಕೆನರಾ, ಕೃಷ್ಣಾ, ಕರ್ನಾಟಕ ಬ್ಯಾಂಕ್ ಸೇರಿದಂತೆ ಅನೇಕ ಸಹಕಾರ ಸಂಘಗಳು ಕೆಲಸ ನಿರ್ವಹಣೆ ಮಾಡುತ್ತಿವೆ. ಅನೇಕ ಸರಕಾರಿ ಮತ್ತು ಖಾಸಗಿ ಶಿಕ್ಷಣ ಸಂಸ್ಥೆಗಳು, ಪದವಿ ಪೂರ್ವ, ಪದವಿ, ತಾಂತ್ರಿಕ ಕಾಲೇಜುಗಳು ಇದ್ದು,ಉತ್ತಮ ಗುಣಮಟ್ಟದ ಶಿಕ್ಷಣ ನಿರಂತರವಾಗಿ ನೀಡುತ್ತಿವೆ.
ಅಲ್ಲದೆ ಸ್ವಾತಂತ್ರ್ಯ ಪೂರ್ವದಲ್ಲಿ ಅಂದರೆ ನಿಜಾಮನ ಆಳ್ವಿಕೆಯ ಸಮಯದಲ್ಲಿ ಚಿಟಗುಪ್ಪಾವು ಜಿಲ್ಲಾ ಕೇಂದ್ರವಾಗಿತ್ತು ಎಂಬುದು ತಿಳಿದು ಬರುತ್ತದೆ.
ಚಿಟಗುಪ್ಪಾ ತನ್ನ ಸುತ್ತಮುತ್ತಲಿನ ಸುಮಾರು 60ಕ್ಕೂ ಹೆಚ್ಚು ಗ್ರಾಮಗಳಿಗೆ ಕೇಂದ್ರ ಪಟ್ಟಣವಾಗಿದ್ದು, ಈ ಭಾಗ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಇಲ್ಲಿಯ ಎಲ್ಲಾ ಗ್ರಾಮಗಳು ಸರ್ವಾಂಗಿಣವಾಗಿ ಅಭಿವೃದ್ಧಿ ಹೊಂದಲು ಚಿಟಗುಪ್ಪಾ ಪಟ್ಟಣವನ್ನು ಕೇಂದ್ರವಾಗಿರಿಸಿಕೊಂಡು ಈಗಿನ ಹುಮನಾಬಾದ್ ವಿಧಾನಸಭಾ ಕ್ಷೇತ್ರದ ಕೆಲವು ಗ್ರಾಮಗಳನ್ನು, ಪಕ್ಕದ ಬೀದರ್ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಕೆಲವು ಹಳ್ಳಿಗಳನ್ನು ಸೇರಿಸಿಕೊಂಡು ನೂತನ ವಿಧಾನಸಭಾ ಕ್ಷೇತ್ರ ಮಾಡುವುದು ಸೂಕ್ತವಾಗಿದೆ ಹಾಗೂ ಅಭಿವೃದ್ಧಿ ಹಿತದೃಷ್ಟಿಯಿಂದ ಇದು ಆದಷ್ಟು ಬೇಗನೆ ಆಗಬೇಕು ಆದರೆ ಒಳ್ಳೆಯದು.
ಇದರಿಂದ ಈ ಭಾಗದ ಅನೇಕ ಗ್ರಾಮಗಳಿಗೆ ಸರ್ಕಾರ ಹೆಚ್ಚಿನ ಅನುದಾನವನ್ನು ಬಿಡುಗಡೆಗೊಳಿಸಿ, ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ. ಈ ಬೇಡಿಕೆ ಇಲ್ಲಿಯ ಜನಪ್ರತಿನಿಧಿಗಳ, ಅಧಿಕಾರಿಗಳ, ಮುಖಂಡರ, ಚಿಟಗುಪ್ಪಾ ಸುತ್ತಮುತ್ತಲಿನ ಗ್ರಾಮಸ್ಥರ ಒತ್ತಾಯವಾಗಿರುವುದರಿಂದ ವಿಧಾನಸಭಾ ಪುನರವಿಂಗಡಣಾ ಆಯೋಗಗಳು ನೂತನ ವಿಧಾನಸಭಾ ಮತಕ್ಷೇತ್ರಗಳ ರಚನೆಯ ಸಂದರ್ಭದಲ್ಲಿ ಚಿಟಗುಪ್ಪಾ ವಿಧಾನಸಭಾ ಮತಕ್ಷೇತ್ರ ರಚನೆಗೆ ಪ್ರಥಮ ಆದ್ಯತೆ ನೀಡಬೇಕೆಂದು ಈ ಮೂಲಕ ಸಂಗಮೇಶ ಎನ್. ಜವಾದಿ ರವರು ರಾಜ್ಯ, ಕೇಂದ್ರ ಸರ್ಕಾರಕ್ಕೆ ಹಾಗೂ ಪುನರ್ ವಿಂಗಡಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದಾರೆ.

  • ಕರುನಾಡ ಕಂದ ಪತ್ರಿಕೆ
ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!