ಬಳ್ಳಾರಿ / ಕಂಪ್ಲಿ : ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸುವುದು, ಅಪರಾಧ ತಡೆಗಟ್ಟಲು ಮಕ್ಕಳಲ್ಲಿ ಅರಿವು ಮೂಡಿಸಿ ಕಾನೂನು ತಿಳಿವಳಿಕೆ ಅಗತ್ಯವಾಗಿದೆ ಎಂದು ಪೊಲೀಸ್ ಠಾಣೆಯ ಎಎಸ್ಐ ಬಸವರಾಜ ತಿಳಿಸಿದರು.
ಪಟ್ಟಣದ ಪೊಲೀಸ್ ಠಾಣೆಗೆ ಗುರುವಾರ ಆಗಮಿಸಿದ ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಮಕ್ಕಳಿಗಾಗಿ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿ, ಪೊಲೀಸ್ ಠಾಣೆಗಳಲ್ಲಿ ಮಕ್ಕಳಿಗೆ ಪೊಲೀಸ್ ವ್ಯವಸ್ಥೆಯ ಬಗ್ಗೆ ತಿಳಿಸುವ ಉದ್ದೇಶವಾಗಿದೆ. ಮಕ್ಕಳ ಸುರಕ್ಷತೆ ಮತ್ತು ಪೊಲೀಸರ ಬಗ್ಗೆ ಇರುವ ಭಯ ಹೋಗಲಾಡಿಸಲು ಇದು ಸಹಕಾರವಾಗಿದೆ. ಪೋಕ್ಸೊ ಕಾಯ್ದೆ ತುಂಬ ಕಠಿಣವಾದದ್ದು. ಈ ಕಾಯ್ದೆ ಕುರಿತು ಮಕ್ಕಳು ಸೇರಿ ಎಲ್ಲ ಜನತೆ ಅರಿವು ಹೊಂದಬೇಕು’ ಎಂದು ಸಲಹೆ ನೀಡಿದರು.
ಕಿಯೋನಿಕ್ಸ್ ಕಂಪ್ಯೂಟರ್ ತರಬೇತಿ ಕೇಂದ್ರದ ಪ್ರಾಚಾರ್ಯ ಬಡಿಗೇರ ಜಿಲಾನ್ ಸಾಬ್ ನೇತೃತ್ವದಲ್ಲಿ ಶಾಲಾ ಮಕ್ಕಳನ್ನು ಠಾಣೆಗೆ ಕರೆತಂದು ಪೊಲೀಸ್ ವ್ಯವಸ್ಥೆಯ ಬಗ್ಗೆ ಸಂಪೂರ್ಣ ಪರಿಚಯ ಮಾಡಿಕೊಡಲಾಯಿತು. ಬಾಂಧವ್ಯ ವೃದ್ಧಿ ಮತ್ತು ಕಲಿಕಾ ಹಂತದಲ್ಲಿ ಮಕ್ಕಳಿಗೆ ಕಾನೂನು ಬಗ್ಗೆ ಅರಿವು ಮೂಡಿಸುವ ಮೂಲಕ ಉತ್ತಮ ನಾಗರಿಕರನ್ನಾಗಿ ರೂಪಿಸುವ ಮೂಲ ಉದ್ದೇಶವಾಗಿದೆ ಎಂದರು.
ಮಕ್ಕಳ ಸಹಾಯವಾಣಿ, ಪೊಕ್ಸ್ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ ಮತ್ತಿತರ ವಿಷಯಗಳ ಬಗ್ಗೆ ತಿಳಿಸಿಕೊಟ್ಟರು.
ಮಕ್ಕಳು ಪೊಲೀಸ್ ಠಾಣೆಗೆ ಭೇಟಿ ನೀಡಿ, ಪೊಲೀಸರ ದೈನಂದಿನ ಕೆಲಸ, ಗಸ್ತು ತಿರುಗುವಿಕೆ ಮತ್ತು ಇತರ ಕಾರ್ಯಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಠಾಣೆಯಲ್ಲಿನ ವ್ಯವಸ್ಥೆ, ಸಿಬ್ಬಂದಿ ಕರ್ತವ್ಯ, ತಾತ್ಕಾಲಿಕ ಸೆಲ್, ಬೇಡಿ, ಬಂದೂಕು ಸೇರಿದಂತೆ ಇತರ ಮಾಹಿತಿ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡರು.
ಈ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳಾದ ರಮೇಶ, ದತ್ತಾತ್ರೇಯ, ದೊಡ್ಡಬಸಮ್ಮ, ಶಿಕ್ಷಕಿಯರಾದ ಕೆ.ಶ್ವೇತಾ, ಜಯಲಕ್ಷ್ಮೀ, ಸುಧಾ, ಕೇಂದ್ರದ ವಿದ್ಯಾರ್ಥಿಗಳಾದ ರಾಜಶೇಖರ, ಇಂದು, ನವ್ಯ, ಭರತ್, ಧನುಷ್, ಮದಿಯಾ, ಶ್ರೀರಕ್ಷಾ, ಶ್ರೀಧನ್ಯ, ಸಚಿನ್, ಸಂತೋಷ್, ಲೇಖನ ಇದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















