ಬಳ್ಳಾರಿ / ಕಂಪ್ಲಿ : ಬೇಸಿಗೆ ಹಿನ್ನಲೆ ಜನಜಾನುವಾರುಗಳಿಗೆ ಕುಡಿಯುವ ನೀರಿನ ಅಭಾವವಾಗದಂತೆ ಸೂಕ್ತಕ್ರಮವಹಿಸಸಲು ಸಂಬಂಧಿಸಿದ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಶಾಸಕ ಜೆ.ಎನ್.ಗಣೇಶ ಹೇಳಿದರು.
ತಾಲೂಕಿನ ನಂ.10 ಮುದ್ದಾಪುರ ಗ್ರಾಪಂಯ ಬೆಳಗೋಡಹಾಳ್ ಗ್ರಾಮದಲ್ಲಿ 2025-26ನೇ ಸಾಲಿನ ಕೆಕೆಆರ್ಡಿಬಿಯ ಮೈಕ್ರೋ ಯೋಜನೆಯಡಿ ಸುಮಾರು 3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶುಕ್ರವಾರದಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿ, ತುಂಗಭದ್ರಾ ಜಲಾಶಯದ ಹೊಸ ಕ್ರಸ್ಡ್ ಗೇಟ್ ಅಳವಡಿಕೆ ಹಿನ್ನಲೆ ಎರಡನೇ ಬೆಳೆಗೆ ನೀರಿಲ್ಲ. ಆದರೆ, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಗ್ರಾಮಗಳಲ್ಲಿ ಕುಡಿಯುವ ನೀರು, ರಸ್ತೆ, ಬೀದಿ ದೀಪ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯದೊಂದಿಗೆ ಸಕಲ ಸೌಲಭ್ಯಗಳಿಗೆ ಜನತೆಗೆ ಕಲ್ಪಿಸಲಾಗುತ್ತಿದೆ. ಈಗಾಗಲೇ ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಸಾಕಷ್ಟು ಅನುದಾನದಲ್ಲಿ ರಸ್ತೆಗಳನ್ನು ಅಭಿವೃದ್ಧಿಪಡಿಸಲಾಗಿದೆ. ಇನ್ನಷ್ಟು ಅಭಿವೃದ್ಧಿ ಕಾರ್ಯಗಳ ಮೂಲಕ ಮಾದರಿ ಕ್ಷೇತ್ರವನ್ನಾಗಿ ಮಾಡಲಾಗುವುದು ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಎಸ್.ಚಂದ್ರಶೇಖರಗೌಡ, ವಾಸು, ಓಂಕಾರಗೌಡ, ಕುಮಾರ, ಜೀರ್ ಅಯ್ಯಪ್ಪ, ಕೇಬಲ್ ಹುಡುಚಪ್ಪ ರಾಜ, ಬಸವರಾಜ, ರುದ್ರಪ್ಪ, ವೆಂಕಟೇಶ ಸೇರಿದಂತೆ ಅನೇಕರಿದ್ದರು.
ವರದಿ : ಜಿಲಾನಸಾಬ್ ಬಡಿಗೇರ್




















