ಬಳ್ಳಾರಿ / ಕಂಪ್ಲಿ : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ 6 ನೇ ತರಗತಿ ಪ್ರವೇಶಾತಿಗಾಗಿ ಭಾನುವಾರ ಪರೀಕ್ಷಾ ಕೇಂದ್ರದಲ್ಲಿ ಜರುಗಿತು. ತಾಲೂಕಿನ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ 6ನೇ ತರಗತಿಯ ಪ್ರವೇಶ ಪರೀಕ್ಷೆಯಲ್ಲಿ 96 ವಿದ್ಯಾರ್ಥಿಗಳ ಪೈಕಿ 85 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ 11 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ ಎಂದು ಎಂದು ಪ್ರಾಂಶುಪಾಲರು ಬಸವರಾಜ್ ಅವರು ಮಾಹಿತಿ ತಿಳಿಸಿದರು.
ಪರೀಕ್ಷೆ ಕೇಂದ್ರ ಸುತ್ತಲೂ ಪೊಲೀಸ್ ಬಿಗಿ ಭದ್ರತೆ ಹಾಗೂ ಯಾವುದೇ ರೀತಿ ತೊಂದರೆ ಹಾಗಲಾರದಂಗೆ ಪರೀಕ್ಷೆ ನಡೆಸಲಾಗುವುದು ಎಂದು ಮಾಹಿತಿ ತಿಳಿಸಿದರು.
ಫಲಿತಾಂಶ: ಪರೀಕ್ಷೆಯ ಫಲಿತಾಂಶಗಳು ಶೀಘ್ರದಲ್ಲೇ ಮುಂದಿನ ದಿನಾಂಕದಂದು ಅಲ್ಪಸಂಖ್ಯಾತರ ನಿರ್ದೇಶನಾಲಯದ ಅಧಿಕೃತ ವೆಬ್‌ಸೈಟ್ dom.karnataka.gov.in ನಲ್ಲಿ ಪ್ರಕಟವಾಗಲಿವೆ.
ಪ್ರವೇಶ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳು ಮತ್ತು ಮೀಸಲಾತಿ ನಿಯಮಗಳ ಆಧಾರದ ಮೇಲೆ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ವಸತಿ, ಊಟ, ಸಮವಸ್ತ್ರ, ಪಠ್ಯಪುಸ್ತಕಗಳು ಮತ್ತು ಗುಣಮಟ್ಟದ ಶಿಕ್ಷಣವನ್ನು ಒದಗಿಸಲಾಗುತ್ತದೆ.
ವರದಿ : ಜಿಲಾನಸಾಬ್ ಬಡಿಗೇರ್




















