ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕಂಪ್ಲಿಯ ದೇವಲಾಪುರ ವೈಷ್ಣವಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ತೃತೀಯ

ಬಳ್ಳಾರಿ / ಕಂಪ್ಲಿ: ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಕಂಪ್ಲಿಯ ದೇವಲಾಪುರ ರಾಘವೆಂದ್ರ ಇವರ ಸುಪುತ್ರಿ ದೇವಲಾಪುರ ವೈಷ್ಣವಿ ರಾಘವೇಂದ್ರ ಇವರು ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ 600ಕ್ಕೆ 598 ಅಂಕಗಳನ್ನು ಪಡೆಯುವ ಮೂಲಕ ಶೇ. 99.67.% ರಷ್ಟು ಫಲಿತಾಂಶವನ್ನು ಪಡೆಯುವ ಮೂಲಕ ರಾಜ್ಯಕ್ಕೆ ಹಾಗೂ ಕಂಪ್ಲಿ ತಾಲ್ಲೂಕಿಗೆ ಕೀರ್ತಿಯನ್ನು ತಂದಿದ್ದಾರೆ.
ರಾಜ್ಯಕ್ಕೆ ಮೂರನೇ ಸ್ಥಾನವನ್ನು ಪಡೆದ ದೇವಲಾಪುರ ವೈಷ್ಣವಿ ರಾಘವೇಂದ್ರ ಇವರನ್ನು ರಾಜ್ಯ ವಿಶ್ವಕರ್ಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಸುಜ್ಞಾನ ಮೂರ್ತಿ ಹಾಗೂ ಪದಾಧಿಕಾರಿಗಳು ಕಂಪ್ಲಿ ಪಟ್ಟಣದ ದೇವಲಾಪುರ ರಾಘವೇಂದ್ರ ಅವರ ನಿವಾಸಕ್ಕೆ ಆಗಮಿಸಿ ದೇವಲಾಪುರ ವೈಷ್ಣವಿ ಅವರನ್ನು ಆತ್ಮೀಯವಾಗಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಕಂಪ್ಲಿ ತಾಲ್ಲೂಕು ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಡಿ.ವೀರಪ್ಪ ಆಚಾರಿ, ಕಾಳಾಚಾರಿ, ನಾರಾಯಣಾಚಾರಿ, ಚಂದ್ರಶೇಖರ ಆಚಾರಿ, ಡಿ.ಭರತ್ ರಾಘವೇಂದ್ರ ಆಚಾರ್ ಮತ್ತು ಕುಟುಂಬದವರು, ಸಿಂಧನೂರು, ಕಂಪ್ಲಿಯ ವಿಶ್ವಕರ್ಮ ಸಮುದಾಯದವರು ಇದ್ದರು.

ವರದಿ : ಜಿಲಾನಸಾಬ್ ಬಡಿಗೇರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!